ಕೊಪ್ಪಳ | ಲಂಚಾರೋಪ: ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸು

Date:

ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಕಟ್ಟಿಮನಿ ಅವರನ್ನು ಅಮಾನತುಗೊಳಿಸುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಶಿಫಾರಸು ಮಾಡಿದ್ದಾರೆ.

- Advertisement -

ಲೇಔಟ್ ಅನುಮೋದನೆಗಾಗಿ ಮಾಲೀಕರೊಬ್ಬರಿಗೆ 3 ಲಕ್ಷ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆಂಬ ಆರೋಪದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಶಿಫಾರಸು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಲಕ್ಷ್ಮಣ್ ಕಟ್ಟಿಮನಿ ಲೇಔಟ್ ಅನುಮೋದನೆಗಾಗಿ ಹಣ ಬೇಡಿದ್ದಾರೆಂಬ ವರದಿಗಳು ದಿನಪತ್ರಿಕೆಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ಪ್ರಕಟವಾಗಿದ್ದವು. ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ಕೇಳಿ ನೋಟೀಸ್ ನೀಡಲಾಗಿತ್ತು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿ, ಲಕ್ಷ್ಮಣ್ ಕಟ್ಟಿಮನಿ ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ವೃತ್ತಿ ನೈತಿಕತೆಯನ್ನು ಮರೆತು, ಕರ್ತವ್ಯಶ್ರದ್ಧೆ ಇಲ್ಲದೆ ಹಣದ ಬೇಡಿಕೆ ಇಟ್ಟಿರುವುದು ಸಾಬೀತಾಗಿದೆ ಎಂದು ತಿಳಿಸಲಾಗಿದೆ. ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ, ಸರ್ಕಾರಿ ಕೆಲಸ ನಿರ್ವಹಿಸುವಲ್ಲಿ ಭ್ರಷ್ಟತನದ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Advertisements

ಈ ವರದಿಯ ಆಧಾರದ ಮೇಲೆ, ಸದರಿ ನೌಕರರ ವಿರುದ್ಧ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಕೋರಿ ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಇವರಿಗೆ ಜಿಲ್ಲಾಧಿಕಾರಿಗಳು ಶಿಫಾರಸು ಮಾಡಿದ್ದಾರೆ.

ಇದೇ ವೇಳೆ ಲಕ್ಷ್ಮಣ್ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ, ಸಕ್ಷಮ ಪ್ರಾಧಿಕಾರಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಕನಕಗಿರಿ ಪಟ್ಟಣ ಪಂಚಾಯಿತಿಯ ಎಲ್ಲಾ ಕೆಲಸಗಳು ಸುಗಮವಾಗಿ ನಡೆಯುವಂತೆ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಪಟ್ಟಣ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್ ಅವರಿಗೆ ಮುಖ್ಯಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ವಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...