ಕೊಪ್ಪಳ | ಜೂ.30ರಿಂದ ಜು.29ವರೆಗೆ ಎಸ್ಐಆರ್

Date:

ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆೆ(ಎಸ್‌ಐಆರ್‌) ಕಾರ್ಯ ಹಿನ್ನೆಲೆಯಲ್ಲಿ 2026ರ ಜೂನ್ 30ರಿಂದ ಜುಲೈ 29ರವರೆಗೆ ಮನೆಮನೆಗೆ ಭೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

- Advertisement -

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ಬಗ್ಗೆ ಕೊಪ್ಪಳ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ಬಳಿಕ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, “ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರು ಬಿಟ್ಟು ಹೋಗಬಾರದು ಎಂಬುದೇ ಈ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ ಎಂಬುದಾಗಿ ಭಾರತ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದಲ್ಲಿ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬಿಎಲ್‌ಎಗಳೂ ಭಾಗಿಯಾಗುತ್ತಾರೆ. ಅವರಿಗೂ ಕೂಡ ಜನತೆ ಸಹಕಾರ ನೀಡಬೇಕು” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಉದ್ದೇಶ ಪೂರ್ವಕವಾಗಿಯೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆಂದು ಯಾರಿಂದಲೂ ದೂರುಗಳು ಬರಬಾರದು ಎಂದು ಈ ಪರಿಷ್ಕರಣಾ ಕಾರ್ಯದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ನೇಮಕಗೊಂಡ ಬಿಎಲ್‌ಎಗಳು ಸಹ ಭಾಗಿಯಾಗಿ ಅವರಿಂದ ಸಲಹೆ ಸೂಚನೆಗೆ ಅವಕಾಶ ಕಲ್ಪಿಸಲಾಗಿದೆ” ಎಂದರು.

ಭಾರತ ಚುನಾವಣಾ ಆಯೋಗವು ಮೇ 14ರಂದು ಅಧಿಸೂಚನೆ ಹೊರಡಿಸಿ, ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ವೇಳಾಪಟ್ಟಿ ನಿಗದಿಪಡಿಸಿದೆ. ನಮ್ಮ ದೇಶದಲ್ಲಿ 2002ರಂದು ಎಸ್.ಐ.ಆರ್ ನಡೆದಿತ್ತು. 2025ರ ಮತದಾರರ ಪಟ್ಟಿಯಲ್ಲಿ ಇರುವವರು 2010ರ ಮತದಾರರ ಪಟ್ಟಿಯಲ್ಲಿ ಎಲ್ಲಿದ್ದರು ಎಂಬುದನ್ನು ಈಗ ಮ್ಯಾಪಿಂಗ್ ಮಾಡಲಾಗುತ್ತಿದೆ.

ಜನಗಣತಿಗೆ ನೇಮಕವಾದ ಅಧಿಕಾರಿಗಳು ಮತ್ತು ಸಿಬ್ಬಂದಿಯು 2002ರ ಮತ್ತು 2025ರ ಈ ಎರಡು ಮತದಾರರ ಪಟ್ಟಿಗಳನ್ನು ಇಟ್ಟುಕೊಂಡು ಮ್ಯಾಪಿಂಗ್ ಕಾರ್ಯ ಮಾಡುತ್ತಿದ್ದಾರೆ. ಜೂನ್ 30ರಿಂದ ಒಂದು ತಿಂಗಳ ಕಾಲ ಬಿಎಲ್‌ಒಗಳು ಮನೆಮನೆಗೆ ಭೇಟಿ ಕೊಡುತ್ತಾರೆ. ಮ್ಯಾಪಿಂಗ್ ಮಾಡಿದ ಎಲ್ಲರಿಗೂ ಜನಗಣತಿ ಫಾರ್ಮನ್ನು ಕೊಡಲಾಗುತ್ತದೆ.

“ಬಿಎಲ್‌ಒಗಳು ಮತದಾರರಿಗೆ ಗೈಡ್ ಮಾಡಿ ಜನಗಣತಿ ಫಾರ್ಮನ್ನು ತುಂಬಿಸುತ್ತಾರೆ. ಗಣತಿ ವೇಳೆಯಲ್ಲಿ, ಮತದಾರರು ನಾನು ಯಾವುದೇ ದೇಶದಲ್ಲಿ ಪೌರತ್ವ ಹೊಂದಿಲ್ಲ. ನನ್ನ ಹೆಸರು ಒಂದೇ ಕಡೆ ಇದ್ದು, ಬೇರೆಡೆ ಎಲ್ಲೂ ಇಲ್ಲ ಎನ್ನುವಂತಹ ಡಿಕ್ಲೇರೆಷನ್ ನೀಡಬೇಕು ಎನ್ನುವಂತಹ ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ” ಎಂದು ತಿಳಿಸಿದರು.

“ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಹೆಸರು ಸೇರಿಸಲು, ಹೆಸರು ತೆಗೆಯಲು ಮತ್ತು ಹೆಸರನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ” ಎಂದರು.

ಇದನ್ನೂ ಓದಿದ್ದೀರಾ? ಪಿಟಿಸಿಎಲ್ ಕಾಯ್ದೆ 1978ರ ಅನುಷ್ಠಾನದಲ್ಲಿ ಗಂಭೀರ ನ್ಯೂನತೆ, ನ್ಯಾಯಾಂಗ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕ ಅಹವಾಲು

“ತೀರಿಕೊಂಡ ಅಥವಾ ಬೇರೆಡೆ ಸ್ಥಳಾಂತರವಾದ ಅಥವಾ ನಕಲಿ ಮತದಾರರು ಯಾರು? ಎಂಬುದನ್ನು ಪತ್ತೆಹಚ್ಚಿ ಮತದಾರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ. ಈ ಪರಿಷ್ಕರಣಾ ಕಾರ್ಯದಲ್ಲಿ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬಿಎಲ್‌ಎಗಳು ಭಾಗಿಯಾಗುತ್ತಾರೆ” ಎಂದರು.

ಕೊಪ್ಪಳ ಜಿಲ್ಲೆಯಲ್ಲಿ 2025ರ ಮತದಾರರ ಪಟ್ಟಿಯಲ್ಲಿ ಒಟ್ಟು 11,92,307 ಮತದಾರರ ಪೈಕಿ ಈವರೆಗೆ 11,34,937 ಮತದಾರರಿಗೆ ಈಗಾಗಲೇ ಮ್ಯಾಪಿಂಗ್ ಮಾಡಿದ್ದು, 57,370 ಮತದಾರರಿಗೆ ಮ್ಯಾಪಿಂಗ್ ಕಾರ್ಯ ಬಾಕಿ ಇದೆ. ಎಂದು ತಿಳಿಸಿದರು.

ಈ ವೇಳೆ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿ.ಪಂ. ಉಪ ಕಾರ್ಯದರ್ಶಿ ಟಿ ಕೃಷ್ಣಮೂರ್ತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...