ಕೊಪ್ಪಳ | ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ವಿದ್ಯಾರ್ಥಿನಿಯರಿಂದ ಜಾಗೃತಿ ಜಾಥಾ

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸುವಂತೆ ಕೊಪ್ಪಳ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಕರೆ ನೀಡಿದರು.

- Advertisement -

ಕೊಪ್ಪಳ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ವಿದ್ಯಾರ್ಥಿನಿಯರಿಂದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು, ಮರಣ ಹೊಂದಿರುವವರು, ಸ್ಥಳಾಂತರಗೊಂಡಿರುವವರು ಹಾಗೂ ನಕಲಿ ಹೆಸರುಗಳು ಮತ್ತು ಇತರ ಅನರ್ಹ ಮತದಾರರ ಮಾಹಿತಿ ಪರಿಶೀಲಿಸಲು ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಲಿದ್ದಾರೆ” ಎಂದು ತಿಳಿಸಿದರು.

ವಿದ್ಯಾರ್ಥಿನಿಯರಿಂದ ಕಾಲ್ನಡಿಗೆ ಜಾಗೃತಿ ಜಾಥಾವು ಕಾಲೇಜಿನಿಂದ ಪ್ರಾರಂಭವಾಗಿ ಮುಂಡರಗಿ ಭೀಮರಾಯ ಸರ್ಕಲ್, ಅಶೋಕ ಸರ್ಕಲ್, ದಿವಟರ ಸರ್ಕಲ್, ಮೇದಾರ ಓಣಿ ಮುಖಾಂತರ ಕಾಲೇಜಿನವರೆಗೆ ಜರುಗಿತು. ಬ್ಯಾನರ್‌ಗಳು ಮತ್ತು ಬಟಿಂಗ್‌ಗಳ ಪ್ರದರ್ಶನದೊಂದಿಗೆ ಜಾಥಾಗೆ ಮೆರಗು ತಂದಿತು. 650ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಾನಂದ ಎ.ಆರ್., ಉಪಪ್ರಾಂಶುಪಾಲ ವಿ.ಜಿ. ಸೂಡಿಮಠ, ಪಂಚಾಯತ್ ರಾಜ್ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್, ಚುನಾವಣಾ ಸಾಕ್ಷರತಾ ಸಂಘದ ಕಾರ್ಯಕ್ರಮ ಅಧಿಕಾರಿ ಸಿದ್ದಪ್ಪ ಮೇಳಿ, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪರಶುರಾಮ್ ಕೆ., ಉಪನ್ಯಾಸಕ ಮಂಜುನಾಥ್, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...