ಮನೆಯಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಗ್ರಾಮದ ಲಕ್ಷ್ಮಣ ಚಲವಾದಿ ಅವರ ಪುತ್ರಿ ಜಯಶ್ರೀ (16) ಎಂದು ಗುರುತಿಸಲಾಗಿದೆ.
ನೃತ್ಯ ಮಾಡುವುದು ಬೇಡ, ದೊಡ್ಡವಳಾದ ಮೇಲೆ ಎಲ್ಲರ ಎದುರು ಡ್ಯಾನ್ಸ್ ಮಾಡುವುದು ಸರಿ ಇರಲ್ಲ ಎಂದು ತಂದೆ-ತಾಯಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ಹಚ್ಚಿಕೊಂಡ ಬಾಲಕಿ ಮನೆಯ ಹಾಲ್‌ನಲ್ಲಿದ್ದ ಶೀಟ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.
ಘಟನೆ ಗಮನಕ್ಕೆ ಬಂದ ಕೂಡಲೇ ಕುಟುಂಬಸ್ಥರು ಆಕೆಯನ್ನು ಹಿಟ್ನಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜಯಶ್ರೀ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಬಿಜೆಪಿ, ಭಕ್ತರು ಮತ್ತು ಸಾರ್ವಜನಿಕ ಸಭ್ಯತೆ
ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿದಿದೆ ಎನ್ನಲಾಗಿದೆ.




