ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು ಹಾಸಿಗೆಯಿಲ್ಲ: ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳ ಪರದಾಟ

Date:

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ  (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು ಎಂಟು ತಿಂಗಳಿಂದ ವಿದ್ಯಾರ್ಥಿಗಳಿಗೆ ಅಗತ್ಯವಾದ ಕಿಟ್‌ಗಳನ್ನು ವಿತರಿಸದಿರುವುದರಿಂದ ವಸತಿ ನಿಲಯದಲ್ಲಿರುವ ಸುಮಾರು 200 ವಿದ್ಯಾರ್ಥಿಗಳು ಅನಿವಾರ್ಯವಾಗಿ ಹೊರಗಡೆಯಿಂದ ತಮ್ಮ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಿ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರದ ವಸತಿ ನಿಲಯಗಳಲ್ಲಿ ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂಬ ಉದ್ದೇಶವಿದೆ. ಆದರೆ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸಿಗಬೇಕಾದ ಸೌಲಭ್ಯಗಳು ಸಮರ್ಪಕವಾಗಿ ದೊರೆಯದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -

ಇನ್ನು ವಿದ್ಯಾರ್ಥಿಗಳ ಮತ್ತೊಂದು ಗಂಭೀರ ಸಮಸ್ಯೆ ಎಂದರೆ ಮಲಗಲು ಬೆಡ್‌ಗಳ ಕೊರತೆ. ವಸತಿ ನಿಲಯದಲ್ಲಿ ವಾಸ್ತವ್ಯ ಹೂಡಿರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬೆಡ್ ವ್ಯವಸ್ಥೆ ಇಲ್ಲದಿರುವುದರಿಂದ ಅನಿವಾರ್ಯವಾಗಿ ವಿದ್ಯಾರ್ಥಿಗಳು ಮನೆಗಳಿಂದ ಚಾಪೆ ಇನ್ನಿತರ ತಂದಿದ್ದಾರೆ. ಓದಿನ ಒತ್ತಡದ ನಡುವೆ ವಿಶ್ರಾಂತಿಗೂ ಸೂಕ್ತ ವ್ಯವಸ್ಥೆ ಇಲ್ಲದಿರುವುದು ವಿದ್ಯಾರ್ಥಿಗಳ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ...

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು ನನ್ನ ಬದುಕಿನ ಅತ್ಯುನ್ನತ ಹೆಮ್ಮೆ. ನನ್ನ ದೇಶಕ್ಕಾಗಿ ಮೈದಾನದಲ್ಲಿ ನನ್ನ ಸರ್ವಸ್ವವನ್ನೂ ಧಾರೆಯೆರೆದಿದ್ದೇನೆ. ನನ್ನ ಬ್ಯಾಟಿಂಗ್‌ ಶೈಲಿ ಮತ್ತು ಹೊಡೆತಗಳು...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಈಗಾಗಲೇ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಸವಾಲುಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು, ವಸತಿ ನಿಲಯದಲ್ಲಿಯೇ ಮೂಲಭೂತ ಸೌಲಭ್ಯಗಳಿಗಾಗಿ ಪರದಾಡಬೇಕಾದ ಪರಿಸ್ಥಿತಿ ಎದುರಾಗಿರುವುದು ದುರದೃಷ್ಟಕರ. ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಮತ್ತು ವಸತಿ ಸೌಲಭ್ಯಕ್ಕಾಗಿ ಅನುದಾನ ಮೀಸಲಿಡುತ್ತಿದ್ದರೂ, ಸೌಲಭ್ಯಗಳು ವಿದ್ಯಾರ್ಥಿಗಳಿಗೆ ತಲುಪದಿರುವುದೇಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಬಡ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಆರ್ಥಿಕ ಹೊರೆ

ಸರ್ಕಾರಿ ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯುವ ಬಹುತೇಕ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಬಂದವರಾಗಿರುತ್ತಾರೆ. ಶಿಕ್ಷಣ, ಊಟ ಮತ್ತು ವಸತಿ ಸೌಲಭ್ಯಗಳಿಗಾಗಿ ಸರ್ಕಾರದ ವ್ಯವಸ್ಥೆಯನ್ನು ಅವಲಂಬಿಸಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ, ಎಂಟು ತಿಂಗಳಿನಿಂದ ಕಿಟ್‌ಗಳ ವಿತರಣೆ ಸ್ಥಗಿತಗೊಂಡಿರುವುದರಿಂದ ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಹೆಚ್ಚುವರಿ ಹಣ ಖರ್ಚು ಮಾಡಬೇಕಾಗಿದೆ.

ca33254c 6a1c 46af b2d1 48b13a661187

ಈಗಾಗಲೇ ಶಿಕ್ಷಣಕ್ಕೆ ಸಂಬಂಧಿಸಿದ ಪುಸ್ತಕಗಳು, ನೋಟ್‌ಬುಕ್‌ಗಳು, ಪ್ರಯಾಣ ವೆಚ್ಚ ಸೇರಿದಂತೆ ಹಲವು ಖರ್ಚುಗಳನ್ನು ನಿಭಾಯಿಸಲು ಹೆಣಗಾಡುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿ ಸಿಗಬೇಕಾದ ಅಗತ್ಯ ವಸ್ತುಗಳನ್ನೂ ಹೊರಗಡೆಯಿಂದ ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಕೆಲ ವಿದ್ಯಾರ್ಥಿಗಳು ಮನೆಯಿಂದ ಹಣ ತರಿಸಿಕೊಂಡರೆ, ಇನ್ನು ಕೆಲವರು ತಮ್ಮಲ್ಲಿರುವ ಅಲ್ಪ ಮೊತ್ತದಲ್ಲಿಯೇ ದಿನನಿತ್ಯದ ಅಗತ್ಯಗಳನ್ನು ಪೂರೈಸಿಕೊಳ್ಳಬೇಕಾದ ಸ್ಥಿತಿ ಇದೆ.

ಈದಿನ.ಕಾಮ್‌ ಜೊತೆಗೆ ವಸತಿ ನಿಲಯದ ವಿದ್ಯಾರ್ಥಿ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮುಖಂಡರಾದ ಉಮೇಶ್ ಬಡಗಿ ಮಾತನಾಡಿ, “ಜಿಲ್ಲೆಯಾದ್ಯಂತ ಇರುವ ಎಲ್ಲಾ SC-ST ಹಾಸ್ಟೆಲ್‌ಗಳಲ್ಲಿ ಕಿಟ್‌ಗಳನ್ನು ನೀಡದಿರುವ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಹಣಕಾಸಿನ ಹೊರೆ ಆಗದಂತೆ, ಕಿಟ್‌ಗಳು ಬರುವವರೆಗೂ ಹೊರಗಡೆಯಿಂದ ಖರೀದಿಸಿ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಎಂಟು ತಿಂಗಳ ಅವಧಿಯಲ್ಲಿ ಕೇವಲ ಎರಡರಿಂದ ಮೂರು ಬಾರಿ ಮಾತ್ರ ಕಿಟ್‌ಗಳನ್ನು ನೀಡಿದ್ದಾರೆ. ಸರ್ಕಾರದಿಂದ ಕಿಟ್‌ಗಳು ಬರದಿರುವುದಕ್ಕೆ ಸೂಕ್ತ ಕಾರಣವನ್ನು ಅಧಿಕಾರಿಗಳು ತಿಳಿಸುತ್ತಿಲ್ಲ. ಈ ಸಮಸ್ಯೆಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸದಿದ್ದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಈದಿನ.ಕಾಮ್‌ ಜೊತೆಗೆ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ರಾಜ್ಯ ಮುಖಂಡರಾದ ದುರುಗೇಶ ಬರಗೂರು ಅವರು, ಜಿಲ್ಲೆಯಾದ್ಯಂತ SC-ST ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಕಿಟ್‌ಗಳ ವಿತರಣೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಬಗೆಹರಿಸಬೇಕು. ವಿದ್ಯಾರ್ಥಿಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಮತ್ತಷ್ಟು ವಿಳಂಬ ಮಾಡಬಾರದು. ಕೂಡಲೇ ಸಮಸ್ಯೆ ಇತ್ಯರ್ಥಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ...

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು...

ಕಲಬುರಗಿ | ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು!

ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಬಿಎಸ್ಸಿ ನರ್ಸಿಂಗ್...

ವಿಜಯಪುರ | ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ...