ಕೊಪ್ಪಳ | ನಿಯಂತ್ರಣ ತಪ್ಪಿ ಹಳ್ಳಕ್ಕಿಳಿದ ಸಾರಿಗೆ ಬಸ್: 6 ಮಂದಿ ಪ್ರಯಾಣಿಕರಿಗೆ ಗಾಯ

Date:

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗಿರಿ ಗ್ರಾಮದ ಬಳಿ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಸ್ ಇಳಿದ ಪರಿಣಾಮ 6 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

- Advertisement -

ತಾಲೂಕಿನ ಮಂಡಲಗಿರಿ ಗ್ರಾಮದ ಬಳಿ ಗದಗ ನಗರದಿಂದ ಕುಕನೂರು ಪಟ್ಟಣಕ್ಕೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನ ಹಳ್ಳಕ್ಕೆ ಇಳಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 6 ಜನರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಕುಕನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
728b35fa 8a1d 4186 a207 846501629b89

ಘಟನಾ ಸ್ಥಳಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕುಕುನೂರು ಘಟಕದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆಗೆ ಬಸ್ ಚಾಲಕನ ನಿರ್ಲಕ್ಷತನದ ಚಾಲನೆಯೇ ಕಾರಣ ಎಂದು ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರು ಹಾಗೂ ಸ್ಥಳದಲ್ಲಿ ಹೊಲಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಶರಣಬಸಪ್ಪ ದಾನಕೈ ಅವರು, “ಅಪಘಾತಕ್ಕೀಡಾದ ಬಸ್ಸಿನಲ್ಲಿ ಪಟಪನ ಹಳ್ಳಿಯಿಂದ ಕುಕುನೂರು ಕಡೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಜರುಗಿದ್ದು, ಏನಾಗುತ್ತಿದೆ ಎಂದು ತಿಳಿಯುವುದರೊಳಗೆ ಬಸ್ ಹಳ್ಳಕ್ಕೆ ಇಳಿದಿದೆ. ಘಟನೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದು, ಕೆಲವರಿಗೆ ತರಚು ಗಾಯಗಳಾಗಿದೆ” ಎಂದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಕನೂರು ಸಾರಿಗೆ ಘಟಕದ ಅಧಿಕಾರಿ ಮಂಜುನಾಥ್, ಘಟನಾ ಸ್ಥಳವನ್ನು ಪರಿಶೀಲಿಸಿದಾಗ ಚಾಲಕನ ನಿರ್ಲಕ್ಷತನ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಮುಂದಿನ ತನಿಖೆಯಲ್ಲಿ ನಿಖರ ಕಾರಣ ತಿಳಿದು ಬರಲಿದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...