ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಆಗಸ್ಟ್ 14ರಂದು ವಾಕ್-ಇನ್ ಇಂಟರ್‌ವ್ಯೂ ಆಯೋಜಿಸಲಾಗಿದೆ. ವಾಕ್-ಇನ್ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿಪ್ಲೋಮಾ, ಬಿಇ, ಬಿ.ಎಸ್.ಸಿ ಅಥವಾ ಎಂ.ಎಸ್.ಸಿ (ಕೆಮಿಸ್ಟ್ರಿ) ಅರ್ಹತೆ ಹೊಂದಿದ್ದು, ಬೋಧನಾ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಭಾಗವಹಿಸಬಹುದು. 18ರಿಂದ 26 ವರ್ಷ ವಯಸ್ಸಿನ ಅರ್ಹ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣಪತ್ರಗಳ 3 ಪ್ರತಿಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಹಾಜರಾಗಬೇಕು.
ಉದ್ಯೋಗಾಕಾಂಕ್ಷಿಗಳು https://forms.gle/yzUzvPfN3wfsXXLg8 ಮೂಲಕ ಮುಂಚಿತವಾಗಿ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳವನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.




