ಕೊಪ್ಪಳ | ಹಳೆಯ ಕಟ್ಟಡಕ್ಕೇ ಕಾಮಗಾರಿ: ₹26 ಲಕ್ಷ ದೋಚುವ ಸ್ಕೆಚ್?

Date:

ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇಶನಹಳ್ಳಿ ಗ್ರಾಮದಲ್ಲಿ ₹26 ಲಕ್ಷ ವೆಚ್ಚದಲ್ಲಿ ಎರಡು ಹೊಸ ಬಾತ್‌ರೂಮ್‌ಗಳು, ಒಂದು ಹೊಸ ಕೊಠಡಿ ಹಾಗೂ ನೀರಿನ ಟ್ಯಾಂಕ್ ನಿರ್ಮಿಸಬೇಕಿದ್ದ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -

ನಿಗದಿತ ಕಾಮಗಾರಿಯ ಬದಲಾಗಿ ಈಗಾಗಲೇ ಇರುವ ಹಳೆಯ ಕಟ್ಟಡದ ಬಾತ್‌ರೂಮ್‌ಗಳನ್ನು ಅರ್ಧಕ್ಕೆ ಕೆಡವಿ, ಅದೇ ಸ್ಥಳದಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
ಹಳೆ ಕಟ್ಟಡಕ್ಕೆ ಕಾಮಗಾರಿ 1

ಈ ಕಾಮಗಾರಿಯಲ್ಲಿ ಜೆಇ ಕಾರ್ತಿಕ್, ಸೂಪರ್‌ವೈಸರ್ ಅಂಬರೀಶ್ ಹಾಗೂ ಗುತ್ತಿಗೆದಾರರು ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ನಾಗೇಶನಹಳ್ಳಿ ಗ್ರಾಮದ ಯುವ ಮುಖಂಡ ಕಾಶಿಂ ಕೆ.ಎನ್. ಊರಿನ ಹಿರಿಯರು ಗಿಣಿಗೇರಾ ಹನುಮಂತಪ್ಪ ಮತ್ತು ಶ್ರೀಧರ ಗೌಡ ಹಾಗೂ ಕರವೇ ಮುತ್ತಪ್ಪ ಅವರು, ಕಾಮಗಾರಿ ಹೆಸರಿನಲ್ಲಿ ಸುಳ್ಳು ಬಿಲ್‌ಗಳನ್ನು ಸೃಷ್ಟಿಸಿ ಹಣ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೋಣ | ಕ್ರೀಡೆಯಿಂದ ನಾಯಕತ್ವ, ಶಿಸ್ತು, ಸಮಯಪ್ರಜ್ಞೆ ವೃದ್ಧಿ: ಡಾ. ಕಸ್ತೂರೆವ್ವ ದಳವಾಯಿ

ಕಾಮಗಾರಿಯ ಸ್ಥಳವನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ಅಂದಾಜು ಪತ್ರ, ಕಾಮಗಾರಿಯ ಪ್ರಮಾಣ, ಗುಣಮಟ್ಟ ಹಾಗೂ ಬಿಲ್‌ಗಳನ್ನು ಸಮಗ್ರವಾಗಿ ಪರಿಶೀಲಿಸಬೇಕೆಂದು ಆಗ್ರಹಿಸಿದ್ದಾರೆ.

ತಪ್ಪು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು KRIDL ಇಲಾಖೆಯ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....