ಕೊಪ್ಪಳ | ವಿಶ್ವ ಸ್ತನ್ಯಪಾನ ಸಪ್ತಾಹ ಜಾಗೃತಿ ಕಾರ್ಯಕ್ರಮ: ಗರ್ಭಿಣಿ, ಬಾಣಂತಿಯರಿಗೆ ಜಾಗೃತಿ

Date:

ಪ್ರತಿ ವರ್ಷ ಆಗಸ್ಟ್ ಮೊದಲನೇ ವಾರ(1-7ನೇ ದಿನ)ದಲ್ಲಿ ʼವಿಶ್ವ ಸ್ತನ್ಯಪಾನ ಸಪ್ತಾಹʼ ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ತಾಯಿಯ ಎದೆಹಾಲು ಶಿಶುವಿಗೆ ನೀಡುವ ವಿಧಾನಗಳ ಬಗ್ಗೆ ಗರ್ಭಿಣಿ, ಬಾಣಂತಿಯರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಕೊಪ್ಪಳ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಪ್ರಕಾಶ್ ವಿ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಕಿನ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ, ʼತಾಯಿಯ ಹಾಲು ಮಗುವಿನ ಮೊದಲ ಹಕ್ಕು-ಆರೋಗ್ಯಕರ ಬದುಕಿನ ಭದ್ರ ಅಡಿಪಾಯʼ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಹೆರಿಗೆಯಾದ ಅರ್ಧ ಗಂಟೆಯಲ್ಲಿ ತಾಯಿಯ ಎದೆಹಾಲು ನೀಡಬೇಕು, ಹೆರಿಗೆಯಾದ ಮೂರು ದಿನದಲ್ಲಿ ಬರುವ ಹಳದಿ ಹಾಲಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುತ್ತದೆ. ಆರು ತಿಂಗಳವರೆಗೆ ಕೇವಲ ತಾಯಿಯ ಎದೆಹಾಲನ್ನು ಮಾತ್ರ ನೀಡಬೇಕು ಬೇರೇನೂ ನೀಡಬಾರದು. ಎದೆಹಾಲು ನೀಡುವುದರಿಂದ ಮಗುವಿನ ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಗುವಿಗೆ ನೀಡುವ ಮೊದಲ ಲಸಿಕೆ ತಾಯಿಯ ಎದೆಹಾಲು. ಎದೆಹಾಲು ಕುಡಿಸುವುದರಿಂದ ತಾಯಿ ಮತ್ತು ಮಗುವಿಗೆ ಬಹಳಷ್ಟು ಉಪಯುಕ್ತವಾಗುತ್ತದೆ. ತಾಯಿ ಮತ್ತು ಮಗುವಿನ ಬಾಂಧವ್ಯ ಹೆಚ್ಚಾಗುತ್ತದೆ” ಎಂದು ಹೇಳಿದರು.

“ತಾಯಿಯ ಎದೆಹಾಲು ನೀಡುವುದರಿಂದ ಸ್ತನ ಕ್ಯಾನ್ಸರ್ ಬರುವುದಿಲ್ಲ. ಗರ್ಭಧಾರಣೆ ಮುಂದೂಡುತ್ತದೆ. ಮಗುವಿಗೆ ಸರಳವಾಗಿ ಜೀರ್ಣವಾಗುತ್ತದೆ. ಎದೆಹಾಲು ಕಾಯಿಸುವ ಅಗತ್ಯವಿಲ್ಲ, ಮಗುವಿಗೆ ಯಾವುದೇ ಕಾರಣಕ್ಕೂ ಬಾಟಲಿ ಹಾಲನ್ನು ನೀಡಬಾರದು. ಒಂದು ವೇಳೆ ಬಾಟಲಿ ಹಾಲನ್ನು ನೀಡಿದರೆ ಮಗುವಿಗೆ ಅತಿಸಾರ ಭೇದಿ ಉಂಟಾಗುವ ಸಾಧ್ಯತೆ ಇರುತ್ತದೆ. ಪ್ರತಿ ತಾಯಿಯೂ ತನ್ನ ಮಗುವಿಗೆ ದಿನಕ್ಕೆ 10-12 ಬಾರಿ ಎದೆಹಾಲು ನೀಡಬೇಕು. ತಾಯಿಯ ಎದೆಹಾಲು ನೀಡುವುದರಿಂದ ಯಾವುದೇ ರೀತಿಯ ಅಪೌಷ್ಠಿಕತೆ, ನಿಮೋನಿಯಾ ಹಾಗೂ ಇತರೆ ಖಾಯಿಲೆಗಳು ಹರಡದಂತೆ ರಕ್ಷಣೆ ನೀಡುತ್ತದೆ. ಮಗುವಿನ ತೂಕವೂ ಹೆಚ್ಚಾಗುತ್ತದೆ. ಇದರಿಂದ ಅಪೌಷ್ಠಿಕ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀತರಾ? ಕಲಬುರಗಿಯಲ್ಲಿ ನೀರಿನ ಹಾಹಾಕಾರ: ಉಜನಿ ಡ್ಯಾಮ್‌ನಿಂದ ರಾಜ್ಯದ ಪಾಲಿನ 15 ಟಿಎಂಸಿ ನೀರು ಬಿಡುಗಡೆಗೆ‌ ರೈತರ ಒತ್ತಾಯ

ಕೊಪ್ಪಳ ತಾಲೂಕಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ ಅವರು ಮಾತನಾಡಿ, “ತಾಯಿಯ ಹಾಲು ಮಗುವಿನ ಉತ್ತಮ ಬೆಳವಣಿಗೆಗೆ ಸಹಕಾರಿ, ತಾಯಿಯ ಆರೋಗ್ಯಕ್ಕೆ ರಕ್ಷಣೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿಗಳು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆಶಾ ಮೇಲ್ವಿಚಾರಕರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ತಾಯಂದಿರು ಭಾಗವಹಿಸಿ ಯಶಸ್ವಿಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಸೌದಿ ಮೇಲೆ ಹೌತಿ ದಾಳಿ ತೀವ್ರ: ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ

ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಸೇರಿದಂತೆ ಪ್ರಮುಖ ನಗರಗಳ ಮೇಲೆ ಯೆಮೆನ್‌ನ...

ರಷ್ಯಾದಲ್ಲಿ ಪುತಿನ್ ಪಕ್ಷ ಮತ್ತೊಂದು ಗೆಲುವಿನ ಹೊಸ್ತಿಲಲ್ಲಿ…

ರಷ್ಯಾದಲ್ಲಿ ನಡೆಯುತ್ತಿರುವ 2026ರ 'ಸ್ಟೇಟ್ ಡೂಮಾ' (ಸಂಸತ್) ಚುನಾವಣೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್...