ಕೊಪ್ಪಳ | ಡೆಂಘಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಲಿಂಗರಾಜು

Date:

ಡೆಂಘಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಟಿ ಲಿಂಗರಾಜು ಹೇಳಿದರು.

ರಾಷ್ಟ್ರೀಯ ಡೆಂಘಿ ದಿನಾಚರಣೆ-2026ರ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಜನಸಮುದಾಯವನ್ನು ಜಾಗೃತಿಗೊಳಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊಪ್ಪಳ ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಡೆಂಘಿ ಜಾಗೃತಿಯ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

- Advertisement -

“ಸರ್ಕಾರದ ಆರೋಗ್ಯ ಸಚಿವಾಲಯದ ನಿರ್ದೇಶನದ ಮೇರೆಗೆ ಪ್ರತಿವರ್ಷದ ಮೇ 16 ಜಿಲ್ಲೆಯಾದ್ಯಾಂತ ರಾಷ್ಟ್ರೀಯ ಡೆಂಘಿ ದಿನಾಚರಣೆಯನ್ನಾಗಿ ಆಚರಿಸುವ ಮೂಲಕ ಡೆಂಗ್ಯೂ ರೋಗ ಪ್ರಸರಣ ಅವಧಿಯ ಮುನ್ನವೇ ಜನ ಸಮುದಾಯವನ್ನು ಜಾಗೃತಿಗೊಳಿಸಲು ವ್ಯಾಪಕ ಅಭಿಯಾನ, ಜಾಥಗಳು, ರ‍್ಯಾಲಿ, ಅಂತರ್ ಇಲಾಖಾ ಸಭೆ ಸಮಾರಂಭಗಳನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರು ಸಹಕರಿಸಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಘಿ ಚಿಕೂನ್‌ಗುನ್ಯಾ ಜ್ವರಗಳಿಗೆ ಯಾವುದೇ ನಿರ್ಧಿಷ್ಟ ಚಿಕಿತ್ಸೆ ಅಥವಾ ಲಸಿಕೆಯಾಗಲಿ ಪ್ರಸ್ತುತ ಲಭ್ಯವಿಲ್ಲದಿದ್ದರೂ ಸಹ ಜನತೆ ಭಯಪಡುವ ಅವಶ್ಯಕತೆ ಇಲ್ಲ. ಡೆಂಘಿ ಚಿಕೂನ್‌ಗುನ್ಯಾ ಜ್ವರಗಳ ಲಕ್ಷಣಗಳನ್ನಾಧರಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಜ್ವರ ಕಾಣಿಸಿಕೊಂಡ ಕೂಡಲೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಮತ್ತು ಉಚಿತ ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು” ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಎಚ್ ನಂದಕುಮಾರ್ ಅವರು ಮಾತನಾಡಿ, “ಡೆಂಘಿ ಜ್ವರವು ವೈರಸ್ ಕಾಯಿಲೆಯಾಗಿದ್ದು, ಇದು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ. ಈ ಸೊಳ್ಳೆಗಳು ಬಹುತೇಕ ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ ಶುದ್ದ ನೀರಿನಲ್ಲಿಯೇ ಸಂತಾನಾಭಿವೃದ್ಧಿ ಮಾಡುತ್ತವೆ. ಹಾಗಾಗಿ ನೀರು ಶೇಖರಿಸುವ ಪಾತ್ರೆ, ತೊಟ್ಟಿ, ಹಂಡೆಗಳನ್ನು ಸದಾಕಾಲ ಮುಚ್ಚಿಡಬೇಕು. ಇದರ ಜೊತೆಗೆ ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬೇಕು” ಎಂದು ಸೂಚನೆ ನೀಡಿದರು.

ಈಡೀಸ್ ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಜನರು ಸಹಕಾರ ನೀಡಿ ಅವರ ಸಲಹೆಗಳನ್ನು ಪಾಲಿಸಬೇಕು. ಈ ವರ್ಷದ ಧ್ಯೇಯವಾಕ್ಯ “ಡೆಂಘಿ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ ಪರಿಶೀಲಿಸಿ, ಸ್ವಚ್ಚಗೊಳಿಸಿ ಹಾಗೂ ಮುಚ್ಚಿಡಿ” ಎಂಬುದಾಗಿದೆ ಎಂದು ಹೇಳಿದರು.

ಜಿಲ್ಲಾ ವಿ.ಬಿ.ಡಿ ನಿಯಂತ್ರಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಗೋನಾಳ್ ಅವರು ಮಾತನಾಡಿ, “ಪ್ರಸ್ತುತ ಪೂರ್ವ ಮುಂಗಾರು ಮಳೆಗಾಲ ಪ್ರಾರಂಭವಾಗಿದ್ದು, ಅಲ್ಲಲ್ಲಿ ನಿಂತ ನೀರಿನ ತಾಣಗಳು ಉತ್ಪತ್ತಿಯಾಗುತ್ತವೆ ಹಾಗೂ ನೀರಿನ ಶೇಖರಣಾ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತದೆ”

“ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಹೆಚ್ಚಾಗುವ ಸಂಭವವಿರುತ್ತದೆ. ಅದರಲ್ಲೂ ಡೆಂಘಿ, ಚಿಕೂನ್‌ಗುನ್ಯಾ ಹರಡುವ ಈಡಿಸ್ ಸೊಳ್ಳೆಗಳು ಮನೆಯ ಒಳಗಡೆ ಕಚ್ಚುವುದರಿಂದ ಡೆಂಗ್ಯೂ, ಚಿಕೂನ್‌ಗುನ್ಯಾ ಜ್ವರಗಳು ಹರಡುವ ಸಾಧ್ಯತೆ ಇರುತ್ತದೆ. ಜ್ವರ ಕಾಣಿಸಿಕೊಂಡಲ್ಲಿ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ, ಉಚಿತ ಚಿಕಿತ್ಸೆ ಪಡೆಯಬೇಕು. ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಕೆಮಾಡಿ. ವಾರಕ್ಕೊಮ್ಮೆ ನೀರು ಸಂಗ್ರಹ ಸಲಕರಗಳನ್ನು ಖಾಲಿಮಾಡಿ ಸ್ವಚ್ಚಗೊಳಿಸಿ, ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾಗುವ ಎಲ್ಲಾ ಸ್ವಯಂ ರಕ್ಷಣ ವಿಧಾನಗಳನ್ನು ಅನುಸರಿಸಿ. ಡೆಂಘಿ ಜ್ವರ ನಿಯಂತ್ರಣಕ್ಕೆ ಜನಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೆ ಪರಿಹಾರ” ಎಂದು ತಿಳುವಳಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್ ಎಚ್ ಎಸ್, ಕೊಪ್ಪಳ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ವ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...