ಕೊಪ್ಪಳ | ಸಾಲಬಾಧೆಯಿಂದ ರೈತ ಆತ್ಮಹತ್ಯೆ

Date:

ರಾಜ್ಯದಲ್ಲಿ ಬರ ಎದುರಾಗಿದ್ದು, ರೈತರು ಬೆಳೆದ ಬೆಳೆ ನೆಲ ಕಚ್ಚಿದೆ. ನಷ್ಟ ಉಂಟಾಗಿದೆ. ಪರಿಣಾಮ, ಕೃಷಿಗಾಗಿ ಸಾಲ ಮಾಡಿದ್ದ ರೈತ, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದ ರೈತ ಮಹೇಶ ಕುದ್ರಿಕಟಿಗಿ ಮೃತ ದುರ್ದೈವಿ. ಅವರು ಖಾಸಗಿ ಬ್ಯಾಂಕ್‌ ಸೇರಿದಂತೆ ವಿವಿಧೆಡೆ ಸಾಲ ಮಾಡಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಗ್ರಾಮದ ರೈತರು ಕೃಷಿಗೆ ಮನೆಯನ್ನೇ ಆಧರಿಸಿದ್ದಾರೆ. ಆದರೆ, ಈ ಬಾರಿ ಮಳೆಯಾಗದೆ ಅಂತರ್ಜಲವೂ ಕುಸಿದಿದೆ. ಹೀಗಾಗಿ, ನಿರೀಕ್ಷಿಸಿದ್ದಷ್ಟು ಬೆಳೆ ಬಂದಿರಲಿಲ್ಲ. ಮಾಡಿದ್ದ ಸಾಲವನ್ನು ತೀರಿಸಲೂ ಆಗಿರಲಿಲ್ಲ. ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದ ರೈತ ಮಹೇಶ್ ಮನನೊಂದು ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...