ಕೊಪ್ಪಳ | ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ; ಮೂವರು ಪೊಲೀಸರು ಅಮಾನತು

Date:

ಗಣೇಶ ವಿಸರ್ಜನೆ ವೇಳೆ  ಮಸೀದಿ ಮುಂದೆ ಪೂಜೆ ಸಲ್ಲಿಸಿದ್ದನ್ನು ತಡೆಗಟ್ಟುವಲ್ಲಿ ವಿಫಲವಾದ ಪೊಲೀಸ್‌ ಸಿಬ್ಬಂದಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಗೊಳಿಸಲಾಗಿದೆ.

- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಂಗಳವಾರ ಹಿಂದು ಮಹಾ ಮಂಡಳಿ ಕಾರ್ಯಕರ್ತರು ಗಣೇಶ ವಿಸರ್ಜನೆ ಕಾರ್ಯಕ್ರಮ ನಡೆಸಿದ್ದರು. ಈ ವೇಳೆ, ಜಾಮೀಯ ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡುತ್ತಿದ್ದ ವಾಹನವನ್ನು ನಿಲ್ಲಿಸಿ ಕುಂಬಳಕಾಯಿ ಹೊಡೆದು, ಹೋಮಕುಂಡ ಹಾಕಿ ಪೂಜೆ ಸಲ್ಲಿಸಲಾಗಿತ್ತು. ಇದಕ್ಕೆ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಸೀದಿ ಮುಂದೆ ಪೂಜೆ ಸಲ್ಲಿಸುವುದು ಕೋಮು ಪ್ರಚೋದನೆ ನೀಡುತ್ತದೆ ಎಂದು ಗೊತ್ತಿದ್ದರೂ, ಪೂಜೆ ಮಾಡುವುದನ್ನು ತಡೆಯುವಲ್ಲಿ ಪೊಲೀಸ್‌ ಸಿಬ್ಬಂದಿ ವಿಫಲವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ, ಗಂಗಾವತಿ ನಗರ ಠಾಣೆ ಇನ್ಸ್​ಪೆಕ್ಟರ್ ಅಡಿವೇಶ ಗುದಿಗೊಪ್ಪ, ಪಿಎಸ್​ಐ ಕಾಮಣ್ಣ ಹಾಗೂ ಹೆಡ್ ಕಾನ್ಸ್‌ಟೇಬಲ್ ಮರಿಯಪ್ಪ ಹೊಸಮನಿ ಅವರನ್ನು ಸಸ್ಪೆಂಡ್ ಮಾಡಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅದೇಶ‌ ಹೊರಡಿಸಿದ್ದಾರೆ.

ಗಂಗಾವತಿ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿದೆ. ಆದರೂ, ಪೊಲೀಸರು ಮಸೀದಿ ಮುಂದೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಅಲ್ಲದೆ, ಮಸೀದಿ ಮುಂದೆ ಪೂಜೆ ಮಾಡಲು ಪೊಲೀಸರು ಬಿಟ್ಟಿದ್ದಾರೆ. ಪರಿಣಾಮ ಪ್ರಕ್ಷುಬ್ಧ ವಾತವರಣ ನಿರ್ಮಾಣವಾಗಿತ್ತು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...