ಕೊಪ್ಪಳ | ಸೌಹಾರ್ದಯುತ ಬಕ್ರೀದ್‌ ಆಚರಣೆಗೆ ಸುರೇಶ ಬಿ ಇಟ್ನಾಳ ಮನವಿ

Date:

ನಾವೆಲ್ಲರೂ ಸೇರಿ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬಕ್ರಿದ್ ಹಬ್ಬ ಆಚರಿಸೋಣ, ಹಬ್ಬದ ಸಂದರ್ಭದಲ್ಲಿ ಯಾರಿಗೂ ತೊಂದರೆಯಾಗದಂತೆ, ಉಪದ್ರವಕ್ಕೆ ಎಡೆಮಾಡದೆ ಶಾಂತಿ ಕಾಯ್ದುಕೊಂಡು ಹೋಗಲು ಅವಕಾಶ ನೀಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಮೇ 25ರಂದು ಜಿಲ್ಲಾಡಳಿತ ಭವನದಲ್ಲಿನ ಡಾ.ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಬಕ್ರೀದ್ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದೇವರ ಉಪಾಸನಾ ಸ್ವಾತಂತ್ರವು ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಲಭಿಸಿದೆ. ಆದ್ದರಿಂದ ಸಾರ್ವಜನಿಕರ ಹಿತಾಸಕ್ತಿಗೆ ದಕ್ಕೆ ಬಾರದಂತೆ ನಾವೆಲ್ಲರೂ ಶಾಂತಿ ಪ್ರೀತಿಯಿಂದ ಹಬ್ಬ ಆಚರಣೆ ಮಾಡಬೇಕು. ಸಾಮಾಜಿಕ ಜಾಲತಾಣಗಳಲ್ಲಿನ ಕೆಲವು ವದಂತಿಗಳಿಗೆ ಯಾರು ಸಹ ಕಿವಿಗೊಡಬಾರದು. ಏನೇ ಸಮಸ್ಯೆ ಇದ್ದರು ಅದನ್ನು ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು” ಎಂದು ಸೂಚನೆ ನೀಡಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರು ಮಾತನಾಡಿ, “ಕಳೆದ ಹತ್ತಾರು ವರ್ಷಗಳಿಂದ ಬಕ್ರೀದ್ ಹಬ್ಬವು ಕೊಪ್ಪಳ ಜಿಲ್ಲೆಯಲ್ಲಿ ಸೌಹಾರ್ದಯುತವಾಗಿ ನಡೆದುಕೊಂಡು ಬಂದ ಸಂಪ್ರದಾಯ ಮುಂದುವರೆಯಬೇಕು. ಇದಕ್ಕೆ ಎಲ್ಲ ಧರ್ಮಗಳ ಬಂಧುಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಯಾವುದೇ ಘಟನೆಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜನತೆಗೆ ತಪ್ಪು ಸಂದೇಶ ರವಾನೆ ಮಾಡಬಾರದು. ಸಾಮಾಜಿಕ ಜಾಲತಾಣಗಳಲ್ಲಿನ ಉಹಾಪೋಹಗಳಿಗೆ ಯಾರು ಸಹ ಕಿವಿಗೊಡಬಾರದು. ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಅಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ವಾಹನದ ಸೌಕರ್ಯ ಇರುತ್ತದೆ” ಎಂದು ತಿಳಿಸಿದರು.

“ಕೊಪ್ಪಳ ಜಿಲ್ಲೆಯಲ್ಲಿ ಹಲವಾರು ದಶಕಗಳಿಂದಲೂ ಹಿಂದೂ-ಮುಸ್ಲಿಂ ಬಾಂಧವರು ಎಲ್ಲ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಈಗಲೂ, ಇನ್ನು ಮುಂದೆಯೂ ಅದೇ ರೀತಿ ಎಲ್ಲರೂ ಪರಸ್ಪರ ಪ್ರೀತಿ ವಿಶ್ವಾಸದಿಂದ ಇರುತ್ತೇವೆ. ಹಬ್ಬದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಶಾಂತಿಪಾಲನೆಗೆ ಅವಕಾಶ ಕಲ್ಪಿಸಬೇಕು. ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು” ಎಂದು ಮುಖಂಡರಾದ ಯಮನೂರಪ್ಪ ನಾಯಕ, ಎಸ್.ಬಿ ಖಾದ್ರಿ ಸೇರಿದಂತೆ ಇನ್ನಿತರರು ಸಭೆಗೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಪೊಲೀಸ್ ಉಪಾಧೀಕ್ಷಕರು, ಇನ್ನಿತರ ಪೊಲೀಸ್ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಜಂತರ್‌ ಮಂತರ್‌ನಲ್ಲಿ ವರದಿಗಾರರಿಗೂ ಪೊಲೀಸರ ನಿರ್ಬಂಧ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ...

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...