ರೇಷನ್ ಕಾರ್ಡ್ ಅನುಮೋದನೆ ಮಾಡಿಕೊಡುವ ನೆಪದಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೊಪ್ಪಳ ಜಿಲ್ಲೆಯ ತಹಶೀಲ್ದಾರ್ ಕಚೇರಿಯ ಆಹಾರ ಇಲಾಖೆ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ.
ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಹಾಗೂ ಪಡಿತರ ಚೀಟಿ ಅನುಮೋದನೆಗಾಗಿ ಕಚೇರಿಗೆ ಬರುವ ಬಡ ಮತ್ತು ಸಾಮಾನ್ಯ ಜನರಿಂದ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ ಎನ್ನಲಾಗಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಸರ್ಕಾರವೇ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವೇತನ ನೀಡಿ ಸಾರ್ವಜನಿಕರ ಸೇವೆಗಾಗಿ ನೇಮಕ ಮಾಡಿದ್ದರೂ, ಸರ್ಕಾರಿ ಕೆಲಸಗಳನ್ನು ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿರುವುದೇಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ರೇಷನ್ ಕಾರ್ಡ್ ಅನುಮೋದನೆ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನಲಾದ ರುದ್ರೇಶ್ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಬೇಕು. ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ: ರವಿಹಂಜ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ
ಸರ್ಕಾರಿ ಕಚೇರಿಗಳು ಜನಸೇವೆಯ ಕೇಂದ್ರಗಳಾಗಬೇಕು. ಹಣ ವಸೂಲಿ ಆರೋಪಗಳಿಗೆ ಕಡಿವಾಣ ಹಾಕಿ, ಪಾರದರ್ಶಕ ಆಡಳಿತಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.



