ಕೊಪ್ಪಳ | ಬರಗಾಲ: ಬೆಳೆ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Date:

ಮಳೆ ಕೊರತೆಯಿಂದ ಬರಗಾಲ ಉಂಟಾಗಿದ್ದು, ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಕೊಪ್ಪಳ ಮತ್ತು ಇರಕಲ್‌ಗಡ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಕೃಷಿ ಜಮೀನುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

- Advertisement -

ಮಳೆ ಕೊರತೆಯಿಂದ ಹಾನಿಗೊಳಗಾದ ಮೆಕ್ಕೆಜೋಳ, ತೊಗರಿ ಹಾಗೂ ಸಜ್ಜೆ ಬೆಳೆಗಳ ತಾಕುಗಳನ್ನು ಪರಿಶೀಲಿಸಿ, ರೈತರೊಂದಿಗೆ ಸಮಾಲೋಚನೆ ನಡೆಸಿ, ರೈತರು ತಮ್ಮ ಬೆಳೆಗಳ ಬೆಳೆ ಸಮೀಕ್ಷೆ(ಕ್ರಾಪ್ ಸರ್ವೇ)ಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೆಳೆ ಸಮೀಕ್ಷೆಯ ಮೂಲಕ ಬೆಳೆ ವಿಸ್ತೀರ್ಣ, ಬೆಳೆಗಳ ಪ್ರಸ್ತುತ ಸ್ಥಿತಿ ಹಾಗೂ ಬೆಳವಣಿಗೆಯ ಮಾಹಿತಿಯನ್ನು ನಿಖರವಾಗಿ ದಾಖಲಿಸಬಹುದಾಗಿದೆ. ಅಲ್ಲದೆ, ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳನ್ನು ಗುರುತಿಸಲು ಬೆಳೆ ಸಮೀಕ್ಷೆಯು ಪ್ರಮುಖ ಆಧಾರವಾಗಿದ್ದು, ಬೆಳೆಹಾನಿ ಪರಿಹಾರ, ಬರ ಘೋಷಣೆ, ಬೆಳೆವಿಮೆ ಪರಿಹಾರ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಈ ಮಾಹಿತಿಯು ಅತ್ಯಂತ ಸಹಕಾರಿಯಾಗಿದೆ ಎಂದು ಹೇಳಿದರು.

“ರೈತರು ಬೆಳೆಗಳನ್ನು ಹರಗುವ ಮೊದಲು ಕಡ್ಡಾಯವಾಗಿ ಬೆಳೆ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು. ಪ್ರಕೃತಿ ವಿಕೋಪಗಳಿಂದ ಉಂಟಾಗುವ ಆರ್ಥಿಕ ನಷ್ಟದಿಂದ ರೈತರನ್ನು ರಕ್ಷಿಸಲು ಬೆಳೆವಿಮೆ ಪರಿಣಾಮಕಾರಿ ಸಾಧನವಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಬೆಳೆವಿಮೆಗೆ ನೋಂದಾಯಿಸಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ವೈದ್ಯಕೀಯ ಕಾಲೇಜು ಕಾಮಗಾರಿ ನಿಗದಿತ ಅವಧಿಯಲ್ಲೇ ಪೂರ್ಣಗೊಳ್ಳಲಿ: ಮೊಹಮ್ಮದ್ ಮೊಹಸೀನ್

ಬೆಳೆವಿಮೆ ಕುರಿತು ಗ್ರಾಮ ಮಟ್ಟದಲ್ಲಿ ಮಾಹಿತಿ, ತರಬೇತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಬೆಳೆ ಸಮೀಕ್ಷೆ

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಜಿ ಡಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಸಿ ಉಕ್ಕುಂದ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ ಎಂ ಮಲ್ಲಯ್ಯ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ, ಉಪ ಕೃಷಿನಿರ್ದೇಶಕ ಎಲ್ ಸಿದ್ದೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ ಪಿಡಿಓಗಳು, ರೈತರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...