ಕೊಪ್ಪಳ | ಅನ್ಯಜಾತಿ ಯುವಕನೊಂದಿಗೆ ವಿವಾಹ; ಗರ್ಭಿಣಿ ತಂಗಿಯ ಹತ್ಯೆಗೆ ಯತ್ನ

Date:

ಅನ್ಯ ಜಾತಿಯ ಯುವಕನ್ನು ಮದುವೆ ಆಗಿದ್ದಕ್ಕೆ ಸ್ವಂತ ನಾಲ್ಕು ತಿಂಗಳ ಗರ್ಭಿಣಿ ತಂಗಿಯನ್ನೇ ವ್ಯಕ್ತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಕೊಪ್ಪಳ ತಾಲೂಕಿನ ಹಂದ್ರಾಳ್ ಗ್ರಾಮದಲ್ಲಿ ಬುಧವಾರ ನಡೆದಿದೆ.

- Advertisement -

ಚಿತ್ತಾಪುರದ ಮೀನಾಕ್ಷಿ ಗಂಭೀರವಾಗಿ ಗಾಯಗೊಂಡ ಮಹಿಳೆ. ಮಂಜುನಾಥ ಎಂಬಾತ ಹಲ್ಲೆ ನಡೆಸಿದ ಆರೋಪಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಒಂದು ವರ್ಷದ ಹಿಂದೆ ಕುರುಬ ಜನಾಂಗಕ್ಕೆ ಸೇರಿದ ಯುವತಿ ಮೀನಾಕ್ಷಿ, ನಾಯಕ ಸಮುದಾಯಕ್ಕೆ ಸೇರಿದ ಯುವಕನ ಜೊತೆ ಮದುವೆ ಆಗಿದ್ದರು. ಒಂದು ವರ್ಷದಿಂದ ಬೇರೆ ಊರಲ್ಲಿ ವಾಸವಿದ್ದ ಇವರು, ಸಂಬಂಧಿಯ ಮದುವೆ ಇದ್ದ ಕಾರಣ ಊರಿಗೆ ಬಂದಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಆರೋಪಿ ಮಂಜುನಾಥ ಮನೆಯಲ್ಲಿ ಇದ್ದ ಮೀನಾಕ್ಷಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಗಾಬರಿಗೊಂಡ ಯುವತಿ ಮದುವೆ ವೇದಿಕೆಯತ್ತ ಓಡಿ ಬಂದಿದ್ದು, ಈ ವೇಳೆ ವೇದಿಕೆಯ ಮುಂದೆಯೇ ಕೊಡಲಿಯಿಂದ ತಲೆಗೆ, ಬೆನ್ನು ಮತ್ತು ಎಡಗೈಗೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ | ವಿದೇಶಿ ಮಹಿಳೆ ಅತ್ಯಾಚಾರ, ಪ್ರವಾಸಿ ಕೊಲೆ ಪ್ರಕರಣ : 3 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ತೀವ್ರವಾಗಿ ಗಾಯಗೊಂಡ ಯುವತಿಯನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ. ಆಸ್ಪತ್ರೆಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿ‌ಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಭೇಟಿ ನೀಡಿ ವಿಚಾರಿಸಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ವಿಶ್ವ ಸ್ತನ್ಯಪಾನ ಸಪ್ತಾಹ ಜಾಗೃತಿ ಕಾರ್ಯಕ್ರಮ: ಗರ್ಭಿಣಿ, ಬಾಣಂತಿಯರಿಗೆ ಜಾಗೃತಿ

ಪ್ರತಿ ವರ್ಷ ಆಗಸ್ಟ್ ಮೊದಲನೇ ವಾರ(1-7ನೇ ದಿನ)ದಲ್ಲಿ ʼವಿಶ್ವ ಸ್ತನ್ಯಪಾನ ಸಪ್ತಾಹʼ...

ಕೊಪ್ಪಳ | ಜು.25, 26ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಜುಲೈ 25 ಮತ್ತು 26ರಂದು...

ಕೊಪ್ಪಳ | ಬರಗಾಲ: ಬೆಳೆ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆ ಕೊರತೆಯಿಂದ ಬರಗಾಲ ಉಂಟಾಗಿದ್ದು, ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ...

ಕುರಿ ಮೇಯಿಸುತ್ತಲೇ ನೀಟ್‌ನಲ್ಲಿ ಅಮೋಘ ಸಾಧನೆ: ಕೊಪ್ಪಳ ವಿದ್ಯಾರ್ಥಿ ಬದುಕಿನ ಯಶೋಗಾಥೆ ಇಲ್ಲಿದೆ ಓದಿ

ʼನಮ್ಮ ಸಾಧನೆಗೆ ಬಡತನ ಅಡ್ಡಿಯಲ್ಲ, ಛಲವೇ ಮುಖ್ಯʼ ಎಂಬುದಕ್ಕೆ ಕುರಿ ಮೇಯಿಸುತ್ತಲೇ...