ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಸೋಮವಾರ ಗವಿಮಠಕ್ಕೆ ಭೇಟಿ ನೀಡಿ, ಸ್ವಾಮೀಜಿಗೆ ಫಲಪುಷ್ಪ ನೀಡಿ ಆತ್ಮೀಯವಾಗಿ ಆಹ್ವಾನಿಸಿದರು.
“ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ” ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿದ್ದೀರಾ? ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ ಬದುಕುವ ಭಗತ್ ಸಿಂಗ್
ಈ ಸಂದರ್ಭ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಇದ್ದರು.




