ಜೂ. 21ರಂದು ನೀಟ್ ಪರೀಕ್ಷೆ: ಕೊಪ್ಪಳದಲ್ಲಿ ನಿಷೇಧಾಜ್ಞೆ ಜಾರಿ

Date:

ನೀಟ್ (ಯುಜಿ)-2026 ಪರೀಕ್ಷೆಯು ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 6.15 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್ ಆದೇಶ ಹೊರಡಿಸಿದ್ದಾರೆ.

ನೀಟ್ (ಯುಜಿ)-2026 ಪರೀಕ್ಷೆಯು ಕೊಪ್ಪಳದ ಗವಿಮಠ ಕ್ಯಾಂಪಸ್‌ನ ಗವಿಸಿದ್ದೇಶ್ವರ ಪಿಯು- ಪದವಿ ಕಾಲೇಜು, ಬಿಇಒ ಕಚೇರಿಯ ಹಿಂದುಗಡೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಲಾರಜಂಗ್ ರಸ್ತೆಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ತಾಲೂಕು ಕ್ರೀಡಾಂಗಣದ ಹತ್ತಿರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 6.15 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...