ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

Date:

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು ಕಾರ್ಖಾನೆಗಳು ವಿಸ್ತರಣೆಗೆ ಮುಂದಾಗಿದ್ದು, ಇದನ್ನು ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ವತಿಯಿಂದ ಕರೆ ನೀಡಿದ ಕೊಪ್ಪಳ-ಭಾಗ್ಯನಗರ ಬಂದ್‌ ಹೋರಾಟಕ್ಕೆ ಉತ್ತಮ ಸ್ಪಂದನ ವ್ಯಕ್ತವಾಗಿದೆ.

- Advertisement -

ಬೆಳಗ್ಗೆಯಿಂದಲೇ ಅಂಗಡಿ–ಮುಂಗಟ್ಟು, ತರಕಾರಿ ಮಾರುಕಟ್ಟೆ, ಪ್ರಮುಖ ವ್ಯಾಪಾರ ಮಾರುಕಟ್ಟೆಗಳು ಬಂದ್‌ ಆಗಿದ್ದವು. ಬಸ್ ನಿಲ್ದಾಣ, ಅಶೋಕ ವೃತ್ತ, ಸ್ಟೇಷನ್ ರಸ್ತೆ ಸೇರಿದಂತೆ ನಗರದ ಎಲ್ಲಾ ವ್ಯಾಪಾರ ಮಳಿಗೆಗಳು ಬಂದ್ ಮಾಡಿತ್ತು. ನಗರದ ಯಾವುದೇ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡದೇ ಸಂಪೂರ್ಣ ಸ್ತಬ್ಧವಾಗಿತ್ತು. ಪೋಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...
93340

ಈಗಿರುವ ಕಾರ್ಖಾನೆಗಳನ್ನು ವಿರೋಧಿಸಿ ಸಂಘಟನೆಗಳು ಒಂದು ವರ್ಷದಿಂದ ನಿರಂತರ ಧರಣಿ ನಡೆಸುತ್ತಿದ್ದು ಶುಕ್ರವಾರ 364 ದಿನಗಳನ್ನು ಪೂರ್ಣಗೊಳಿಸಿದೆ. ಧರಣಿ ಆರಂಭಿಸಿ ಶನಿವಾರ ಸರಿಯಾಗಿ ಒಂದು ವರ್ಷ ಆಗಲಿರುವ ಕಾರಣ ಬಂದ್ ಕರೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಕೊಪ್ಪಳ ಬಂದ್ ಕರೆ ಯಶಸ್ವಿಗೊಂಡಿದೆ ಎಂದು ಹೋರಾಟದ ಮುಖಂಡ ದುರುಗೇಶ್ ಬರಗೂರು ಹೇಳಿದರು.

ಕೆಲವು ದಿನ ಹಿಂದೆ ಬಸಾಪೂರ ಬಳಿ ಇರುವ ಬಲ್ಡೋಟಾ ಕಾರ್ಖಾನೆ ಮುಂಭಾಗ ಭಾರೀ ಪ್ರತಿಭಟನೆ ರೈತರು ನಡೆಸಿದ್ದರು. ಪ್ರತಿಭಟನೆಯಲ್ಲಿ ಕೇವಲ ರೈತರಷ್ಟೇ ಅಲ್ಲದೇ ನೂರಾರು ಕುರಿಗಳು ಮತ್ತು ಜಾನುವಾರುಗಳು ಕಾರ್ಖಾನೆಯ ಬೃಹತ್ ಗೇಟಿನ ಮುಂದೆ ಸಾಲುಗಟ್ಟಿ ಪ್ರತಿಭಟನೆ ಮಾಡಲಾಗಿತ್ತು. ಇಡೀ ರಾಜ್ಯಾದ್ಯಂತ ವಿಡಿಯೋಗಳು ವೈರಲ್ ಆಗಿದ್ದವು ಆದರೂ ಸರ್ಕಾರ ಕೊಪ್ಪಳ ಜನತೆಯ ಕೂಗು ಕೇಳಿಸುತ್ತಿಲ್ಲ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ಪ್ರತಿಭಟನೆಯಲ್ಲಿ, ಮಾಜಿ ಶಾಸಕರು ಮಹಿಮಾ ಪಟೇಲ್, ಚೇತನ್ ಅಹಿಂಸಾ, ಬಡಗಲಪುರ ನಾಗೇಂದ್ರ ಇನ್ನಿತರರು ಗಣ್ಯ ವ್ಯಕ್ತಿಗಳು ಹೋರಾಟದಲ್ಲಿ ಭಾಗಿಯಾಗಿದ್ದಾರೆ.

93352
93346
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...