ಎಸ್‌ಐಆರ್‌: ಕಸಾಪ ಮಾಜಿ ಅಧ್ಯಕ್ಷರ ಹೆಸರು ಡಿಲೀಟ್‌; ಹಾರಿಕೆ ಉತ್ತರ ಕೊಟ್ಟ ಬಿಎಲ್‌ಒ

Date:

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ, ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿ, ನಿರುತ್ತರ ಪ್ರೌಢ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಮತ್ತು ಸುದ್ದಿ ಚಿಂತನ ಪತ್ರಿಕೆಯ ಸಂಪಾದಕರಾಗಿ 10 ವರ್ಷಗಳ ಸೇವೆ ಸಲ್ಲಿಸಿದ್ದ ಛತ್ರಪ್ಪ ಹನುಮಪ್ಪ ನಾರಿನಾಳ ಹೆಸರನ್ನು ಮತಪಟ್ಟಿಯಿಂದ ಕೈಬಿಟ್ಟಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಚುನಾವಣಾ ಆಯೋಗದ ನಿರ್ಲಕ್ಷ್ಯದ ಬಗ್ಗೆ ವಿಡಿಯೋ ಹರಿಬಿಟ್ಟಿರುವ ಛತ್ರಪ್ಪ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ನಾನು ಕಳೆದ 50-55 ವರ್ಷಗಳಿಂದಲೂ ಗಂಗಾವತಿ ನಿವಾಸಿಯಾಗಿದ್ದೇನೆ. 1970ರಿಂದಲೂ ಪ್ರತಿಯೊಂದು ಚುನಾವಣೆಯಲ್ಲೂ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡುತ್ತಾ ಬಂದಿದ್ದೇನೆ. 2002 ಹಾಗೂ 2025ರ ಮತದಾರರ ಪಟ್ಟಿಯಲ್ಲೂ ನನ್ನ ಹೆಸರಿರುವುದಕ್ಕೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ” ಎಂದು ಆಕ್ರೋಶ ಹೊರಹಾಕಿರುವ ಛತ್ರಪ್ಪ ಅವರು ಈ ಬಾರಿ ಬಿಎಲ್ಒ ನನ್ನ ಸಂಪರ್ಕವನ್ನೇ ಮಾಡಿಲ್ಲವೆಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಎಲ್ಓಗಳು ನನಗೆ ಯಾವುದೇ ಎನ್ಯುಮರೇಷನ್ ಫಾರ್ಮ್ ನೀಡಿಲ್ಲ. ನಾನು ಖುದ್ದಾಗಿ ಬಿಎಲ್‌ಒ ಅವರನ್ನು ವಿಚಾರಿಸಿದಾಗ, ‘ಸದ್ಯಕ್ಕೆ ನಿಮ್ಮ ಹೆಸರು ಪಟ್ಟಿಯಲ್ಲಿ ಇಲ್ಲ. ಮುಂದೆ ನೋಡೋಣ’ ಎಂದು ಸಬೂಬು ಹೇಳಿದ್ದಾರೆ. ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ಹೇಳಲಾಗುತ್ತಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ, ಸಮ್ಮೇಳನದ ಅಧ್ಯಕ್ಷನಾಗಿ ಊರಿನಲ್ಲಿ ಪ್ರತಿಯೊಬ್ಬರಿಗೂ ಚಿರಪರಿಚಿತನಿರುವ ನನಗೇ ಈ ಪರಿಸ್ಥಿತಿಯಾದರೆ, ಇನ್ನು ಯಾವುದೇ ಬೆಂಬಲವಿಲ್ಲದ ಸಾಮಾನ್ಯ ಜನರ ಮತದಾನದ ಹಕ್ಕಿನ ಕಥೆಯೇನು? ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಮುನ್ನ ಯಾವುದೇ ನೋಟಿಸ್ ನೀಡಿಲ್ಲ ಹಾಗೂ ಸೂಕ್ತ ದಾಖಲೆಗಳನ್ನು ಪರಿಶೀಲಿಸದಿರುವುದು ಆಡಳಿತ ಯಂತ್ರದ ಜವಾಬ್ದಾರಿ ರಹಿತ ನಡವಳಿಕೆಯನ್ನು ಪ್ರದರ್ಶಿಸುತ್ತದೆ. ಅಧಿಕಾರಿಗಳು ತಕ್ಷಣವೇ ಈ ಪ್ರಮಾದವನ್ನು ಸರಿಪಡಿಸಿ, ತಮ್ಮ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...