ತೀರ್ಥಹಳ್ಳಿ ದುರಂತ: ಮೃತರ ಕುಟುಂಬಕ್ಕೆ ತಂಗಡಗಿ ಸಾಂತ್ವನ; ಪರಿಹಾರದ ರಸೀದಿ ಹಸ್ತಾಂತರ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮರಣ ಹೊಂದಿದ ಕೊಪ್ಪಳ ಜಿಲ್ಲೆಯ ಕಕ್ಕರಗೋಳ ಗ್ರಾಮದ ಕುಟುಂಬಸ್ಥರ ಮನೆಗೆ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿದರು. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪರಿಹಾರ ವಿತರಣೆ ಮಾಡಿದರು.

- Advertisement -

ತಹಶೀಲ್ದಾರ್ ಅವರ ವಿಪತ್ತು ನಿರ್ವಹಣಾ ಖಾತೆಯಿಂದ 15 ಲಕ್ಷ ರೂಪಾಯಿಗಳನ್ನು ಮೃತರ ಇಬ್ಬರು ಮಕ್ಕಳ ಖಾತೆಗೆ ಜಮಾ ಮಾಡಲಾಗಿತ್ತು. ಮೃತರ ಹೆಣ್ಣು ಮಕ್ಕಳಾದ ದಿವ್ಯ ಹಾಗೂ ಮಹಾಲಕ್ಷ್ಮಿ ಅವರ ಖಾತೆಗೆ ಜಮಾ ಮಾಡಿದ್ದ ಹಣದ ರಸೀದಿಯನ್ನು ಸಚಿವರು, ಅವರ ಅಜ್ಜಿ ಗೌರಮ್ಮ ಸಮ್ಮುಖದಲ್ಲಿ ವಿತರಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ವಿದ್ಯಾಭ್ಯಾಸಕ್ಕೆ ಅನುಕೂಲ: ಮೃತ ದಂಪತಿಯ ಪುತ್ರಿ ದಿವ್ಯ ಏಳು ವರ್ಷದವಳಾಗಿದ್ದು ಮೊದಲನೇ ತರಗತಿಯಲ್ಲಿ ಹಾಗೂ ಮಹಾಲಕ್ಷ್ಮಿ ಒಂಬತ್ತು ವರ್ಷದವಳಾಗಿದ್ದು ಮೂರನೇ ತರಗತಿಯಲ್ಲಿ ಓದುತ್ತಿದ್ದಾಳೆ. ಇವರ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಬೇಕೆಂದು ಕುಟುಂಬಸ್ಥರು ಸಚಿವರಲ್ಲಿ ಮನವಿ ಮಾಡಿದರು. ಕುಟುಂಬದವರು ಒಪ್ಪಿದಲ್ಲಿ ಬಾಲಕಿಯರು ಬಾಲಮಂದಿರದಲ್ಲಿ ಉಳಿದು ಓದಲು ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ಸಚಿವರು ತಿಳಿಸಿದರು. ಕುಟುಂಬದವರು ಒಪ್ಪದಿದ್ದಲ್ಲಿ ದಿವ್ಯ ಮತ್ತು ಮಹಾಲಕ್ಷ್ಮಿ ಇಬ್ಬರಿಗೂ ತಿಂಗಳಿಗೆ ತಲಾ ನಾಲ್ಕು ಸಾವಿರ ರೂಪಾಯಿಯಂತೆ ಮೂರು ವರ್ಷಗಳ ಕಾಲ ಪ್ರಾಯೋಜಕತ್ವದಡಿ ಸಹಾಯಧನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಮೃತ ಕುಟುಂಬದವರು ಬಡವರಾಗಿದ್ದಾರೆ. ಅವರಿಗೆ ವಾಸಿಸಲು ಮನೆ ನೀಡಬೇಕು ಎಂದು ಗ್ರಾಮಸ್ಥರು ಕೋರಿದರು. ಪಂಚಾಯಿತಿ ಅಧಿಕಾರಿಗಳಿಗೆ ಹೇಳಿ ಮನೆ ಕೊಡಿಸುವುದಾಗಿ ಸಚಿವರು ಭರವಸೆ ನೀಡಿದರು.

ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಪಾವತಿ: ತೀರ್ಥಹಳ್ಳಿಗೆ ದುಡಿಯಲು ಹೋಗಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಿಲುಕಿ ತೀವ್ರ ಗಾಯಗೊಂಡ ಕಕ್ಕರಗೋಳದ ಹನುಮಂತ (ತಂದೆ ಫಕೀರಪ್ಪ) ಹಾಗೂ ಮುಕ್ಕುಂದದ ಅಮೃತ (ಗಂಡ ರಾಮಣ್ಣ) ಅವರು ಸಚಿವರನ್ನು ಭೇಟಿ ಮಾಡಿ ಪರಿಹಾರ ಕೋರಿದರು. ಗಾಯಗೊಂಡವರಿಗೂ ನಿಯಮಾನುಸಾರ ಚಿಕಿತ್ಸಾ ವೆಚ್ಚ ಪಾವತಿ ಮತ್ತು ಇತರೆ ಪರಿಹಾರಕ್ಕೆ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಸಚಿವರು ತಿಳಿಸಿದರು.

ತೀರ್ಥಹಳ್ಳಿ ತಾಲೂಕಿನ ಇಂದಿರಾ ನಗರದಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಕಾರಟಗಿ ತಾಲೂಕಿನ ಕಕ್ಕರಗೋಳ ಗ್ರಾಮದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದರು. ಮೃತರ ವಾರಸುದಾರರಿಗೆ ತಲಾ ಐದು ಲಕ್ಷ ರೂಪಾಯಿಯಂತೆ ಒಟ್ಟು 15 ಲಕ್ಷ ರೂಪಾಯಿ ಪರಿಹಾರವನ್ನು ತಹಶೀಲ್ದಾರ್ ಶಿವಮೊಗ್ಗ ವಿಪತ್ತು ನಿರ್ವಹಣಾ ಖಾತೆಯಿಂದ ವಿತರಿಸಲು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಅದರಂತೆ ಈಗ ಮೃತರ ಕುಟುಂಬಸ್ಥರಿಗೆ ಪರಿಹಾರ ವಿತರಣೆ ಮಾಡಲಾಗಿದೆ.

ಈ ವೇಳೆ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕಾರಟಗಿ ತಹಶೀಲ್ದಾರ್ ಕುಮಾರಸ್ವಾಮಿ, ಇಓ ಲಕ್ಷ್ಮೀದೇವಿ ಯಾದವ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ (ಯಲಿಗಾರ) ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರೆ ಜನಪ್ರತಿನಿಧಿಗಳು, ಮೃತರ ಕುಟುಂಬಸ್ಥರು ಹಾಗೂ ಕಕ್ಕರಗೋಳ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೆಹರೂ-ಶಾಸ್ತ್ರಿ ಕಾಲದ ಕಟ್ಟಡಗಳಿಗೆ ಮೋದಿ ಬುಲ್ಡೋಝರ್: ಕೃಷಿ ಭವನ, ಶಾಸ್ತ್ರಿ ಭವನ ನೆಲಸಮಕ್ಕೆ ಸಿದ್ಧತೆ!

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ನವದೆಹಲಿಯ ಲೂಟಿಯನ್ಸ್ ವಲಯದಲ್ಲಿ ಕೈಗೆತ್ತಿಕೊಂಡಿರುವ 'ಸೆಂಟ್ರಲ್...

​’ಮಹಿಳಾ ಮೀಸಲಾತಿ’ಗಾಗಿ ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ಸಾಧ್ಯತೆ?

ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಗೆ ವೇಗ ನೀಡುವ ಉದ್ದೇಶದಿಂದ,...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...