ಎಡದಂಡೆ ಕಾಲುವೆಗೆ ತುಂಗಭದ್ರಾ ಕುಡಿಯುವ ನೀರು: ರೈತರಿಗೆ ಬಳಕೆ ನಿಷೇಧ

Date:

ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.

- Advertisement -

ಇದಕ್ಕೆ ಸಂಬಂಧಿಸಿದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್‌ಗಳ ಮುಖಾಂತರ ಕೆರೆಕಟ್ಟೆಗಳಲ್ಲಿ ಕುಡಿಯುವ ಸಲುವಾಗಿ ನೀರು ಶೇಖರಣೆ ಮಾಡಬೇಕು. ನಿಗದಿತ ಪ್ರಮಾಣದ ನೀರನ್ನು 104 ಮೈಲಿಯವರೆಗೂ ಹರಿಸಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಸಮರ್ಪಕ ನೀರು ನಿರ್ವಹಣೆ ಮಾಡಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಿಗದಿತ ವೇಳಾಪಟ್ಟಿ: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ (0 ರಿಂದ 104 ಮೈಲ್ ವರೆಗೆ) ಗೆ ಕುಡಿಯುವ ನೀರಿಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಜುಲೈ 10ರ ಬೆಳಗ್ಗೆ 8 ಗಂಟೆಯಿಂದ ಜುಲೈ 23ರ ಗುರುವಾರ ರಾತ್ರಿ 8 ಗಂಟೆವರೆಗೆ 2,000 ಕ್ಯುಸೆಕ್ಸ್‌ನಂತೆ ಕುಡಿಯುವ ನೀರು ಹರಿಸಲಾಗುವುದು ಎಂದು ತಿಳಿಯಪಡಿಸಲಾಗಿದೆ.

ಅದರಂತೆ, ಯರಮರಸ್ ವಿಭಾಗದಲ್ಲಿ ಜುಲೈ 13ರಿಂದ ಜುಲೈ 16ರವರೆಗೆ, ಸಿರವಾರ ವಿಭಾಗದಲ್ಲಿ ಜುಲೈ 17ರಿಂದ 19ರವರೆಗೆ, ಸಿಂಧನೂರು ವಿಭಾಗದಲ್ಲಿ ಜುಲೈ 20ರಿಂದ 22ರವರೆಗೆ ಮತ್ತು ವಡ್ಡರಹಟ್ಟಿ ವಿಭಾಗದಲ್ಲಿ ಜುಲೈ 22 ಮತ್ತು 23ರಂದು ನೀರು ಹರಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಹರಿಸಲಾಗುತ್ತಿದ್ದು, ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಜನಸಾಮಾನ್ಯರು ಅಥವಾ ರೈತರು ಬಳಸುವುದನ್ನು ನಿಷೇಧಿಸಲಾಗಿದೆ.

ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸುವಂತೆ ಕನೀನಿನಿ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್. ಬಿ. ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...