ಉಡುಪಿ | ಏಳನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಉಪವಾಸ ಸತ್ಯಾಗ್ರಹಕ್ಕೆ ಸಿದ್ಧತೆ

Date:

ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ–ಕೇರಳ ಇದರ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ–ಸತ್ಯಾಗ್ರಹವು ಇಂದು ಏಳನೇ ದಿನಕ್ಕೆ ಕಾಲಿಟ್ಟಿದ್ದು, ಯುವಜನರಿಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ನೀಡಬೇಕೆಂಬ ಪ್ರಮುಖ ಬೇಡಿಕೆಯೊಂದಿಗೆ ಹೋರಾಟ ಮತ್ತಷ್ಟು ತೀವ್ರಗೊಂಡಿದೆ.

- Advertisement -
WhatsApp Image 2025 12 19 at 7.19.23 PM 1

ಪ್ರತಿಭಟನೆಯಲ್ಲಿ ಕೊರಗ ಸಮುದಾಯದ ತಾಯಂದಿರು ಚಿಕ್ಕ ಮಕ್ಕಳೊಂದಿಗೆ ಭಾಗವಹಿಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ಕುಟುಂಬ ಸಮೇತರಾಗಿ ಹೋರಾಟ ನಡೆಸುತ್ತಿರುವುದು ತಮ್ಮ ಬದುಕಿನ ಅಸಹಾಯಕ ಸ್ಥಿತಿಯನ್ನು ಮತ್ತು ಸರ್ಕಾರದ ನಿರ್ಲಕ್ಷ್ಯದ ವಿರುದ್ಧದ ಆಕ್ರೋಶವನ್ನು ಪ್ರತಿಬಿಂಬಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿ : ಕೊರಗ ಸಮುದಾಯಕ್ಕೆ ಸರ್ಕಾರಿ ಉದ್ಯೋಗ : ಬರೀ ಕನಸು ಮಾತ್ರ ! https://eedina.com/karnataka/udupi-koraga-community-protest-at-dc-office/2025-12-19/

ತಾಯಂದಿರ ಜೊತೆ ಚಿಕ್ಕ ಮಕ್ಕಳು ಧರಣಿಯಲ್ಲಿ ಕುಳಿತಿರುವುದು ಈ ಹೋರಾಟದ ಗಂಭೀರತೆಯನ್ನು ತೋರಿಸುತ್ತದೆ. ಇದು ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಡೆಯುತ್ತಿರುವ ಹೋರಾಟ. ಇಂದು ಹೋರಾಡದಿದ್ದರೆ ನಾಳೆ ಅವರ ಬದುಕು ಇನ್ನಷ್ಟು ಕಠಿಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

WhatsApp Image 2025 12 21 at 8.10.38 PM

ಆಡಳಿತದ ಸ್ಪಂದನೆ ಇಲ್ಲವೆಂಬ ಆರೋಪ : ಈದಿನ.ಕಾಮ್‌ ಜೊತೆ ಮಾತನಾಡಿದ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ–ಕೇರಳ ಇದರ ಅಧ್ಯಕ್ಷರಾದ ಸುಶೀಲ ನಾಡ, ಏಳು ದಿನಗಳಾದರೂ ಜಿಲ್ಲಾಡಳಿತದಿಂದ ಸ್ಪಷ್ಟ ಹಾಗೂ ಲಿಖಿತ ಭರವಸೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಬೇಡಿಕೆಗಳು ಈಡೇರುವವರೆಗೂ ಅಹೋರಾತ್ರಿ ಧರಣಿ–ಸತ್ಯಾಗ್ರಹವನ್ನು ಮುಂದುವರಿಸುವುತ್ತೇವೆ ಇನ್ನೂ ಉಪವಾಸ ಸತ್ಯಾಗ್ರಹ ಕೂರುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಿದ್ದರೆ ರಾಜ್ಯ ಮಟ್ಟದ ಹೋರಾಟಕ್ಕೆ ವಿಸ್ತರಿಸುವುದಾಗಿ ಹೇಳಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಈಗಾಗಲೇ ದಲಿತ ಸಂಘಟನೆಗಳು, ಉಡುಪಿ ಶಾಸಕರಾದ ಯಶ್ಫಾಲ್‌ ಸುವರ್ಣ, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಮಕ್ಕಳೊಂದಿಗೆ ಕುಳಿತಿರುವ ತಾಯಂದಿರ ದೃಶ್ಯಗಳು ಆಡಳಿತವನ್ನು ಶೀಘ್ರ ಸ್ಪಂದಿಸಲು ಒತ್ತಡ ಹೆಚ್ಚಿಸುತ್ತಿವೆ.

hhjj 1

ಕೊರಗ ಸಮುದಾಯದ ಅನೇಕ ವಿದ್ಯಾವಂತ ಯುವಕರು ಶಿಕ್ಷಣ ಪಡೆದಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಸಂವಿಧಾನದಲ್ಲಿ ಒದಗಿಸಿರುವ ಹಕ್ಕುಗಳು ಹಾಗೂ ಸರ್ಕಾರ ಘೋಷಿಸಿರುವ ಭರವಸೆಗಳು ಕಾಗದದಲ್ಲೇ ಉಳಿದಿದ್ದು, ನೇರ ನೇಮಕಾತಿ ಮೂಲಕ ಉದ್ಯೋಗ ಕಲ್ಪಿಸಬೇಕು ಎಂಬುದು ಪ್ರತಿಭಟನಾಗಾರರ ಮುಖ್ಯ ಆಗ್ರಹವಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...