ಕೊರಟಗೆರೆ | ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ

Date:

ಭ್ರಷ್ಟಾಚಾರವು ಕೇವಲ ಹಣದ ವ್ಯವಹಾರವಲ್ಲ, ಅದು ನೈತಿಕ ಮೌಲ್ಯಗಳ ಕುಸಿತವಾಗಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಪಾರದರ್ಶಕತೆ, ನೈತಿಕತೆ ಮತ್ತು ಹೊಣೆಗಾರಿಕೆಯಿಂದ ನಡೆದುಕೊಂಡಾಗ ಮಾತ್ರ ಶುದ್ಧ ಆಡಳಿತ ಸಾಧ್ಯ ಎಂದು ತುಮಕೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಶಿವರುದ್ರಪ್ಪ ಮೇಟಿ ಹೇಳಿದರು.

- Advertisement -

ಭ್ರಷ್ಟಾಚಾರವೆಂಬ ಸಾಮಾಜಿಕ ವ್ಯಾಧಿಗೆ ಅಂತ್ಯಗೊಳಿಸುವ ದೃಢಸಂಕಲ್ಪದೊಂದಿಗೆ “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ–೨೦೨೫” ಕಾರ್ಯಕ್ರಮವನ್ನು ಕರ್ನಾಟಕ ಲೋಕಾಯುಕ್ತ, ತುಮಕೂರು ಘಟಕದ ವತಿಯಿಂದ ಮಂಗಳವಾರ ತಾ.ಪಂ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜನಸಾಮಾನ್ಯರ ಸಹಕಾರವಿಲ್ಲದೆ ಭ್ರಷ್ಟಾಚಾರ ವಿರೋಧಿ ಚಳವಳಿ ಯಶಸ್ವಿಯಾಗಲಾರದು,ಈ ಪಿಡುಗಿಗೆಯಾರೊಬ್ಬರೂ ಒಳಗಾಗಬಾರದು ವೃತ್ತಿ ಪಾವಿತ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ತಹಶೀಲ್ದಾರ್ ಮಂಜುನಾಥ ಕೆ. ಮಾತನಾಡಿ, ಭ್ರಷ್ಟಾಚಾರವನ್ನು ನಿರ್ಮೂಲಗೊಳಿಸುವ ಹೋರಾಟ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಕಾನೂನಿನಲ್ಲಿ ಭ್ರಷ್ಟಾಚಾರ ವಿರುದ್ಧ ಕಠಿಣ ಶಿಕ್ಷೆಗಳು ಇದ್ದರೂ, ಜನರು ತಮ್ಮ ಹಕ್ಕುಗಳನ್ನು ಅರಿತು ಧೈರ್ಯವಾಗಿ ದೂರು ನೀಡಬೇಕಾಗಿದೆ, ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನ ಬಳಕೆಯು ಸಹಾಯಕವಾಗುತ್ತದೆ ಇದನ್ನು ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಬಳಕೆ ಮಾಡಬೇಕು ಎಂದರು.

ತಾ.ಪಂ ಇಓ ಅಪೂರ್ವ  ಮಾತನಾಡಿ, ಸರ್ಕಾರಿ ಸೇವೆ ಒಂದು ಕರ್ತವ್ಯ ಮತ್ತು ಸೇವಾ ಧರ್ಮ. ಅಧಿಕಾರಿಗಳು ಜನರ ವಿಶ್ವಾಸ ಗೆಲ್ಲಬೇಕಾದರೆ ಭ್ರಷ್ಟಾಚಾರದಿಂದ ದೂರವಿರುವ ನೈತಿಕ ಬದ್ಧತೆ ಅಗತ್ಯ, ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಮುಖ ಅಂಗವಾಗಿ ತಾಲೂಕು ಮಟ್ಟದ ಅಧಿಕಾರಿಗಳಿಗೆ, ನೌಕರರಿಗೆ ಮತ್ತು ಸಾರ್ವಜನಿಕರಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿಯ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ಗುರುಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...