ಕೊರಟಗೆರೆ | ಹೂಲೀಕುಂಟೆ ಗ್ರಾ.ಪಂ ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

Date:

ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹೋಲೀಕುಂಟೆ ಗ್ರಾ.ಪಂ ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಗ್ರಾ.ಪಂ ಅಧ್ಯಕ್ಷೆ ರಂಗಮ್ಮ ರಾಜಣ್ಣ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಅಮೃತ ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ನೂತನ ಗ್ರಾ.ಪಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಗ್ರಾ.ಪಂ ನೂತನ ಅಧ್ಯಕ್ಷೆ ಅಮೃತ ಮಂಜುನಾಥ್ ಮಾತನಾಡಿ, ರಾಜ್ಯದ ಗೃಹ ಸಚಿವರು ಮತ್ತು ಕ್ಷೇತ್ರದ ಶಾಸಕರಾದ ಡಾ.ಜಿ ಪರಮೇಶ್ವರ್‌ರವರ ಆಶೀರ್ವಾದದಿಂದ ಮತ್ತು ಹೂಲೀಕುಂಟೆ ಗ್ರಾ.ಪಂ ಎಲ್ಲಾ ಸದಸ್ಯರು ಪಕ್ಷಬೇದ ಮರೆತು ಅಧ್ಯಕ್ಷರಾಗಿ ನನ್ನನ್ನು ಅವಿರೋಧ ಆಯ್ಕೆ ಮಾಡಿದ್ದಾರೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ತಿಳಿಸಿದರು.

ಜೆಡಿಎಸ್ ಅಧ್ಯಕ್ಷ ಕಾಮರಾಜು ಮಾತನಾಡಿ, ಹೂಲೀಕುಂಟೆ ಗ್ರಾ.ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಮೃತ ಮಂಜುನಾಥ್ ಅವರಿಗೆ ಅಭಿನಂದನೆಗಳು.

ಎಲ್ಲಾ ಗ್ರಾಮಗಳಿಗೆ ಸರ್ಕಾರದ ಪ್ರತಿ ಸೌಲಭ್ಯವನ್ನು ಕಲ್ಪಿಸಿ ನಡೆಯುತ್ತಿರುವ ಅಭಿವೃದ್ಧಿ ಕಾಮಾಗಾರಿ ಪೂರ್ಣಗೊಳಿಸಿ ಮಾದರಿ ಗ್ರಾ.ಪಂಚಾಯ್ತಿಯನ್ನಾಗಿ ಮಾಡುವಂತೆ ಸಲಹೆ ನೀಡಿದರು.

ಗ್ರಾ.ಪಂ ಸದಸ್ಯ ಮಲ್ಲಣ್ಣ ಮಾತನಾಡಿ, ಗೃಹ ಸಚಿವರ ಆಶೀರ್ವಾದದಿಂದ ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ನೂತನ ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಆಯ್ಕೆಯಾಗಿದ್ದು, ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕಡೆ ಗಮನಹರಿಸುವಂತೆ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷೆ ರಂಗಮ್ಮ ರಾಜಣ್ಣ, ಉಪಾಧ್ಯಕ್ಷ ನಟರಾಜ್, ಪಿಡಿಒ ಮೈಲಣ್ಣ, ಸದಸ್ಯ ಡಿ.ಎಲ್ ಮಲ್ಲಣ್ಣ, ಜಿ.ಸಿ ರಮೇಶ್, ಮಲ್ಲಿಕಾರ್ಜುನ್, ಬೈಲಾ ಕುಮಾರ್, ಶಾಂತಮ್ಮ, ನಾಗರತ್ನಮ್ಮ, ಗಂಗಾಧರ, ದಿವ್ಯಜ್ಯೋತಿ, ಪ್ರೇಮಾ, ಜಯಮ್ಮ ಸೇರಿದಂತೆ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...