ಕೊರಟಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಭ್ರಮ : ಸಾಧಕರಿಗೆ ಸನ್ಮಾನ

Date:

ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಸೃಷ್ಠಿಸಿಕೊಂಡು ಕಾರ್ಯನಿರ್ವಹಿಸಿ ಸಾಧಕರಾಗಿ ಹೊರಹೊಮ್ಮಿದ್ದಾರೆ ಎಂದು ಪ್ರಾಶುಂಪಾಲ ಈರಪ್ಪನಾಯಕ ಪ್ರಶಂಸೆ ವ್ಯಕ್ತಪಡಿಸಿದರು.

- Advertisement -

ಕೊರಟಗೆರೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ವಾಣಿಜ್ಯ ವಿಭಾಗದಿಂದ ಆಯೋಜಿಸಲಾದ ವಾಣಿಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ವಿಶ್ವವಿದ್ಯಾಲಯದಲ್ಲಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಶೇಷ ಮನ್ನಣೆ ಪಡೆದಿದೆ. ಭೋಧಕರುಗಳ ಪರಿಶ್ರಮದಿಂದ ಯುವಕ-ಯುವತಿಯರಲ್ಲಿ ಕ್ರೀಡಾ ಉತ್ಸಾಹ, ಕಾಲೇಜಿನ ಫಲಿತಾಂಶ ಅತ್ಯುತ್ತಮವಾಗಿದೆ. ಖಾಸಗಿ ಕಾಲೇಜಿನ ಮನಸ್ಸುಗಳಿಗೂ ಸರ್ಕಾರಿ ಕಾಲೇಜಿನ ಮನಸ್ಸುಗಳಿಗೂ ಹೋಲಿಕೆ ಮಾಡಬಾರದು. ಏಕೆಂದರೆ ಸರ್ಕಾರಿ ಕಾಲೇಜಿನ ಶಿಕ್ಷಣ ಮತ್ತು ಕಾರ್ಯ ಚಟುವಟಿಕೆಗಳು ಗುಣಮಟ್ಟದಲ್ಲಿವೆ. ಇಂತಹ ಕಾರ್ಯಕ್ರಮಗಳು ಹಳೆ ವಿದ್ಯಾರ್ಥಿಗಳ ಸಾಧಕ ಗಣ್ಯರ ನೇತೃತ್ವದಲ್ಲಿ ಪ್ರತಿವರ್ಷ ನಡೆಯಬೇಕು ಎಂದು ಅಭಿಪ್ರಾಯ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಪತಯ್ಯ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆ ಮಾಡಬೇಕಾದರೆ ತಾಳ್ಮೆ, ಕಠಿಣ ಪರಿಶ್ರಮ, ಚಾಣಾಕ್ಷತೆ ಹೊಂದಿರಬೇಕು. ಸಾಧಕ ಗಣ್ಯರ ಸಲಹೆಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅನುಸರಿಸಿ ಜೀವನದಲ್ಲಿ ಅಳವಡಿಸಿಕೊಂಡು ನಡೆದಾಗ ಯಶಸ್ಸು ಒಲಿದು ಬರಲಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯೋತ್ಸವವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. 

ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ನಾಗೇಶ್.ಬಿ ಮಾತನಾಡಿ, ಬಡ ಕುಟುಂಬದ ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಣವೊಂದೇ ಮೂಲ ಮಂತ್ರ. ವಿದ್ಯೆ ಸಾಧಕನ ಸ್ವತ್ತೇ ಹೊರೆತು ಸೋಮಾರಿಯಾ ಸ್ವತ್ತಲ್ಲಾ ಎಂಬ ಗಾದೆ ಮಾತನ್ನು ಜೀವನದಲ್ಲಿ ಅಳವಡಿಸಿಕೊಂಡು ಜೈನ್ ವಿಶ್ವವಿದ್ಯಾಲಯದ ಉಪನ್ಯಾಸಕನಾಗಿದ್ದೇನೆ. ಸಾಧಕರ ಅಭಿಪ್ರಾಯ ತಿಳಿದು ಸಾಧಕರ ಹಾದಿಯಲ್ಲಿ ನಡೆದಾಗ ಆಧುನಿಕ ಸಮಾಜಕ್ಕೆ ಏನಾದರೂ ವಿಶೇಷ ಕೊಡುಗೆ ನೀಡಲು ಸಾಧ್ಯ ಎಂದರು.

ಹಳೆಯ ವಿದ್ಯಾರ್ಥಿ ಪೊಲೀಸ್ ಪೇದೆ ಸೌಮ್ಯ ದೇವರಾಜು ಮಾತನಾಡಿ ಮಹಿಳೆ ಇಡೀ ದೇಶವನ್ನೆ ಆಳುವ ಅವಕಾಶ ನಮ್ಮ ಸಂವಿಧಾನ ಸಮಾನತೆಯ ಹಕ್ಕು ನೀಡಿದೆ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನುಡಿಯಂತೆ ಎಲ್ಲಾರೂ ಶಿಕ್ಷವನ್ನು ಕಲಿಯುವಂತ್ತಾಗಬೇಕು. ಪದವಿ ಮಟ್ಟದಲ್ಲಿ ತಮ್ಮ ಜೀವನ ನಿರ್ಧಾರಗಳನ್ನು ತೆಗೆದುಕೊಳ್ಳುವುದಯ ನಮ್ಮೇಲ್ಲರ ಜವಾಬ್ದಾರಿಯಾಗಿದೆ. ಪದವಿಯನ್ನು ಪಡೆದು ಮುಂದಿನ ಮೈಲುಗಲ್ಲಿಗೆ ಕಾಲಿಟ್ಟು ಉನ್ನತ ಸ್ಥಾನಗಳನ್ನು ಅಲಂಕಾರಿಸಬೇಕು, ಮಹಿಳೆಯೇ ಧೃತಿಗೆಡದೆ ಧೈರ್ಯವಾಗಿ ಮುನ್ನೆಡೆದು ಜೀವನ ಸಾಗಿಸಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾಣಿಜ್ಯೋತ್ಸವ ಸಂಭ್ರಮದಲ್ಲಿ ವಾಣಿಜ್ಯ ವಿಭಾಗದಿಂದ ತುಮಕೂರು ವಿವಿಯಲ್ಲಿ ರ‍್ಯಾಂಕ್ ಪಡೆದ ೧೫ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಮತ್ತು ವಾಲಿಬಾಲ್, ತ್ರೋಬಾಲ್ ಕ್ರೀಡೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಮೆಡಲ್ ಮತ್ತು ಅಭಿನಂದನಾ ಪತ್ರ ವಿತರಿಸಿ ಕಲಿಕೆಗೆ ಪ್ರೋತ್ಸಾಹಿಸಿದ್ದು ಒಂದೆಡೆಯಾದರೆ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಕ್ರೀಡೆ ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಿದ್ದು ಕಾರ್ಯಕ್ರಮದಲ್ಲಿ ವಿಶೇಷವಾಗಿತ್ತು.

 ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಡಾ.ದೀಪಾ ಡಿ.ಎಸ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಡಾ.ಅಮಿತಾ ಕೆ.ವಿ, ನಟರಾಜ್, ಜ್ಯೋತಿ, ನಟರಾಜ್ ಎಂ.ಎಚ್, ಲೋಹಿತ್‌ರಾಮ್ ಎಸ್.ಕೆ, ಚೈತಾಲಿ ಕೆ.ಎಸ್, ಹಳೆ ವಿದ್ಯಾರ್ಥಿಗಳಾದ ದುಷ್ಯಂತ್, ನಾಗೇಶ್ ಸಿ.ಎಲ್, ರಂಜಿತ್, ಬಿರೇಂದ್ರ, ಹರ್ಷ ಟಿ.ಜಿ, ಪರ್ತಕರ್ತ ನರಸಿಂಹಮೂರ್ತಿ, ಬಾಬುನಾಯ್ಕ, ರಾಜು ಕೆ.ಜೆ, ದೇವರಾಜು, ಆಕಿಲೇಶ್, ಸೌಮ್ಯ ಕೆ.ಎಸ್, ಮಂಜುನಾಥ್, ಗೌರ್ಧನ್, ಡಾ.ನಾಗೇಶ್, ಡಾ.ಕಿರಣ್ ಹೆಚ್.ಎಸ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...