ಕೊರಟಗೆರೆ | ಬೈಚಾಪುರ ಗ್ರಾಪಂ ಅಧ್ಯಕ್ಷೆಯಾಗಿ ರಾಮಲಕ್ಷ್ಮಮ್ಮ ಆಯ್ಕೆ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಗ್ರಾ.ಪಂ ಎಲ್ಲಾ ಗ್ರಾಮಗಳಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದು ನೂತನ ಅಧ್ಯಕ್ಷೆ ರಾಮಲಕ್ಷ್ಮಮ್ಮ ತಿಳಿಸಿದರು.

- Advertisement -

ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾ.ಪಂ ಅಧ್ಯಕ್ಷೆಯಾಗಿ ಗುರುವಾರ ಅವಿರೋಧ ಆಯ್ಕೆಯಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಹಿಂದೆ ತಿಪ್ಪೇಶ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. 19 ಮಂದಿ ಸದಸ್ಯರಲ್ಲಿ ೪ಮಂದಿ ಸದಸ್ಯರು ಗೈರಾಗಿದ್ದು, 15  ಸದಸ್ಯರು ಮಾತ್ರ ಚುನಾವಣೆ ವೇಳೆ ಹಾಜರಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಮಲಕ್ಷಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಸದಸ್ಯರ ಒಮ್ಮತದಂತೆ ಅವಿರೋಧ ಆಯ್ಕೆಯ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಅಪೂರ್ವ ಅಧಿಕೃತ ಘೋಷಣೆ ಮಾಡಿದರು.

ನೂತನ ಗ್ರಾ.ಪಂ ಅಧ್ಯಕ್ಷೆ ರಾಮಲಕ್ಷಮ್ಮ ಮಾತನಾಡಿ, ಗೃಹ ಸಚಿವರಾದ ಡಾ.ಜಿ ಪರಮೇಶ್ವರ್‌ರವರ ಆಶೀರ್ವಾದದಿಂದ ಮತ್ತು ಸದಸ್ಯರ ಬೆಂಬಲದಿಂದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಗ್ರಾ.ಪಂ ಎಲ್ಲಾ ಗ್ರಾಮಗಳಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿ ಪಡಿಸುವ ಉದ್ಧೇಶ ಹೊಂದಿದ್ದೇನೆ. ಆಯ್ಕೆ ಮಾಡಿದ ಸದಸ್ಯರಿಗೆ ಕೃತಜ್ಞತೆ ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ವೆಂಕಟೇಶ್‌ಬಾಬು ಮಾತನಾಡಿ, ಬಸವನಹಳ್ಳಿ ಗ್ರಾಮಕ್ಕೆ ಈ ದಿನ ವಿಶೇಷವಾದ ದಿನ, 30 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಗ್ರಾಮದಿಂದ ಅಧ್ಯಕ್ಷರಾಗಿರುವುದು, ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಆಶೀರ್ವಾದದಿಂದ ಸದಸ್ಯರು ಬೆಂಬಲ ಸೂಚಿಸಿ ನಮ್ಮ ತಾಯಿ ರಾಮಲಕ್ಷಮ್ಮ ರವರನ್ನು ಆಯ್ಕೆ ಮಾಡಿದ್ದು, ಸದಸ್ಯರ ಬೆಂಬಲಕ್ಕೆ ನಮ್ಮ ಕುಟುಂಬ ಚಿರಖುಣಿಯಾಗಿದೆ ಎಂದು ಹೇಳಿ ತಾಯಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾ.ಪಂ ಪಿಡಿಓ ಉಮೇಶ್ ಮಾತನಾಡಿ, ಚುನಾವಣಾಧಿಕಾರಿ ಅಪೂರ್ವ ಅನಂತರಾಮುರವರ ನೇತೃತ್ವದಲ್ಲಿ ಸದಸ್ಯರ ಒಮ್ಮತದಂತೆ ರಾಮಲಕ್ಷಮ್ಮರವರು ಅಧ್ಯಕ್ಷೆಯಾಗಿ ಗುರುವಾರ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಈ ವೇಳೆ ಗ್ರಾ.ಪಂ ಸದಸ್ಯರಾದ ಸಮೀಉಲ್ಲಾ, ಲಕ್ಷ್ಮೀಪತಿ, ತಿಪ್ಪೇಶ್, ಗೋವಿಂದರಾಜು, ಮಂಜುನಾಥ್ ಆರ್‌ಸಿ, ಕಾಂಚನ, ವೆಂಕಟಾಚಲಯ್ಯ, ಮೀನಾಕ್ಷಿ, ಅರಸಮ್ಮ, ಶೋಭಾ, ಕರಿಯಪ್ಪ, ಕೆಂಪಲಕ್ಷಮ್ಮ, ಬಸಮ್ಮ, ನಾಗರಾಜು, ಗ್ರಾ.ಪಂ ಪಿಡಿಓ ಉಮೇಶ್, ತಾ.ಪಂ ಮಾಜಿ ಉಪಾಧ್ಯಕ್ಷ ವೆಂಕಟಪ್ಪ, ಮಾಜಿ ಗ್ರಾ.ಪಂ ಅಧ್ಯಕ್ಷ ನಾಗರಾಜು, ವೆಂಕಟೇಶ್, ತಾ.ಪಂ ಮಾಜಿ ಸದಸ್ಯ ರಾಜಣ್ಣ, ಮುಖಂಡರಾದ ನವೀನ್, ಕೃಷ್ಣಮೂರ್ತಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...