ಕೊರಟಗೆರೆ | ಚಾಕು ಇರಿತ : ಮೂರು ಜನ ಬಂಧನ

Date:

ಮಗಳನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ತಂದೆಗೆ ಆರೋಪಿ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಚಾಕು ಹಾಕಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಕೊರಟಗೆರೆ ತಾಲ್ಲೂಕಿನ ಸಿ ಎನ್ ದುರ್ಗಾ ಹೋಬಳಿ ಬೋರಪ್ಪನಹಳ್ಳಿ ಗ್ರಾಮದಲ್ಲಿ ದುರ್ಘಟನೆ ಜರುಗಿದ್ದು, ಶಾಲಾ ವಿದ್ಯಾರ್ಥಿನಿಯನ್ನ ಅನಾವಶ್ಯಕವಾಗಿ ರೇಗಿಸುತ್ತಿದ್ದ ಯುವಕ ನನ್ನ ಪ್ರಶ್ನಿಸಿದ ತಂದೆ ಗಿರೀಶ್ ಎಂಬುವರ ಮೇಲೆ ಮೂರು ಜನ ದಾಳಿ ನಡೆಸಿ ಕ್ರಿಕೆಟ್ ಬ್ಯಾಟ್‌ನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೇ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡುವ ಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

8 ನೇ ತರಗತಿಯ ವಿದ್ಯಾರ್ಥಿಯನ್ನು ಇದೇ ಗ್ರಾಮದ ಪೃಥ್ವಿರಾಜ್ ಎಂಬ ಯುವಕ ಪದೇ ಪದೇ ಚುಡಾಯಿಸುವುದನ್ನು ಪ್ರಶ್ನಿಸಿದ ತಂದೆ ಗಿರೀಶ್ ನನ್ನ ಆರೋಪಿ ಪೃಥ್ವಿರಾಜ್, ಅಣ್ಣ ತಿಮ್ಮೇಗೌಡ ಹಾಗೂ ತಂದೆ ಹನುಮಂತರಾಯ ಎಂಬುವರು ಏಕಾಏಕಿ ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಹೊಡೆದು ನಂತರ ಚಾಕುವಿನಿಂದ ಭುಜ ಭಾಗ ಹಾಗೂ ತೊಡೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನ ಪಟ್ಟರು ಎಂದು ದೂರಿನಲ್ಲಿ ತಿಳಿಸಲಾಗಿ ಊರಿನ ಗ್ರಾಮಸ್ಥರು ನನ್ನ ಕಿರಿಚಾಟದಿಂದ ಸಾರ್ವಜನಿಕರು ಸೇರಿ ನನ್ನನ್ನು ಬಚಾವ್ ಮಾಡಲಾಗಿದ್ದು ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇವೆ ಎಂದು ದೂರಿನಲ್ಲಿ ವಿವರಿಸಿದ್ದಾರೆ

ಇದೇ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಅನಿಲ್ ಹಾಗೂ ಪಿಎಸ್‌ಐ ತೀರ್ಥೇಶ್ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...