ಉಡುಪಿ | ಮನುವಾದಿಗಳು ಸಂವಿಧಾನ, ನ್ಯಾಯಾಂಗದ ಮೇಲೆ ದಾಳಿ ನಡೆಸುತ್ತಿದ್ದಾರೆ – ಕೋಟ ನಾಗೇಂದ್ರ ಪುತ್ರನ್

Date:

ಮನುವಾದಿಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿಲ್ಲದೆ, ಬಾಯಿಗೆ ಬಂದಂತೆ ಮಾತನಾಡಿ ಸಂವಿಧಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮನುವಾದಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಾ. ಗವಯ್ ಅವರ ಮೇಲೆ ಶೂ ಎಸೆದಿದ್ದಾರೆ. ಇದು ಕೇವಲ ವ್ಯಕ್ತಿಗೆ ಅಲ್ಲ, ಭಾರತದ ಸಂವಿಧಾನ, ನ್ಯಾಯಾಂಗ ಮೇಲಿನ ದಾಳಿ. ಇಂಥ ಕೃತ್ಯಗಳು ಸಂವಿಧಾನದ ಮೂಲ ತತ್ವಗಳನ್ನೇ ಬುಡಮೇಲು ಮಾಡಲು ಹೊರಟಿರುವ ಮನುವಾದಿಗಳ ನಿಜಸ್ವಭಾವವನ್ನು ತೋರಿಸುತ್ತದೆ. ಒಬ್ಬ ಹಿರಿಯ ವಕೀಲ ಹೀಗೆ ಮಾಡಿರುವುದು ಆಶ್ಚರ್ಯಕರ. ಮಾನ್ಯ ಸುಪ್ರೀಂ ಕೋರ್ಟ್ ಚೀಫ್ ಜಸ್ಟಿಸ್‌ಗಳ ಮೇಲೆ ಶೂ ಎಸೆದು, ಅದನ್ನು ಸಮರ್ಥಿಸಿಕೊಂಡಿರುವುದು ಅನಾಗರಿಕತೆಯ ಸೂಚನೆ. ಇದು ಕಾನೂನಿನ ಗೌರವಕ್ಕೆ ಧಕ್ಕೆ ತರುವ ಕಾರ್ಯವಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ನ್ಯಾಯಮೂರ್ತಿ ಗವಯ್ ಅವರ ಮೇಲೆ ನಡೆದಿರುವ ಈ ದಾಳಿ ಜಾತಿ ದ್ವೇಷದಿಂದ ಪ್ರೇರಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಗವಯ್ ಅವರ ಕುತ್ತಿಗೆಗೆ ಮಡಿಕೆ ಹಾಕಿ, ಅವರಿಗೆ ಚಪ್ಪಲಿಯಲ್ಲಿ ಹೊಡೆಯುವ ಫೋಟೋಗಳನ್ನು ಹಂಚಿರುವುದನ್ನು ನಾನು ನೋಡಿದ್ದೇನೆ. ಇದು ಸಂಪೂರ್ಣವಾಗಿ ದಲಿತ ಸಮುದಾಯದ ವಿರುದ್ಧದ ಅವಮಾನಕಾರಿ ಕೃತ್ಯ, ಎಂದು ಹೇಳಿದ್ದಾರೆ.

ಒಂದು ಬ್ರಾಹ್ಮಣ ಹುಡುಗನ ಜನಿವಾರ ತೆಗೆದ ಘಟನೆಗೆ ಬೆಂಕಿ ಹಚ್ಚಿದ ಬಿಜೆಪಿ ನಾಯಕರು, ಇದೀಗ ಗವಯ್ ಅವರ ಮೇಲೆ ಶೂ ಎಸೆದ ವಿಷಯದಲ್ಲಿ ಮೌನವಾಗಿರುವುದು ಇತಿಹಾಸದಲ್ಲಿ ಮರೆಯಲಾಗದ ಲಜ್ಜಾಸ್ಪದ ಘಟನೆ. ನ್ಯಾಯಮೂರ್ತಿ ಮೇಲೆ ಶೂ ಎಸೆದ ವ್ಯಕ್ತಿಯನ್ನು ಕಾಪಾಡುವ ಧೋರಣೆ ಅಸಹ್ಯಕರವಾಗಿದೆ. ಭಾಸ್ಕರ್ ರಾವ್ ಅವರಂತಹ ಹಿರಿಯ ಅಧಿಕಾರಿ ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವುದು ತಪ್ಪು, ಆದರೆ ಆ ವ್ಯಕ್ತಿಯ ಧೈರ್ಯ ಮೆಚ್ಚಬೇಕು’ ಎಂದು ಹೇಳುವುದು ಅತ್ಯಂತ ಲಜ್ಜಾಸ್ಪದ. ಇದು ಕಾನೂನು ಪಾಲಕರಿಂದ ಬಂದ ಲಜ್ಜೆ ಗೆಟ್ಟ ಹೇಳಿಕೆ ಆಗಿದೆ. ಇಂಥ ವ್ಯಕ್ತಿಗಳು ಸಮಾಜದಲ್ಲಿ ಹಿತಚಿಂತಕರಾಗಲು ಯೋಗ್ಯರಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...