ಉಡುಪಿ | 1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ, ಶಿಕ್ಷಣ ಸಚಿವ ಘೋಷಣೆ

Date:

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

- Advertisement -

ಈ ಹಿಂದೆ, ಮಕ್ಕಳು 1ನೇ ತರಗತಿಗೆ ದಾಖಲಾಗಲು ಕಡ್ಡಾಯವಾಗಿ 6 ವರ್ಷದ ವಯೋಮಿತಿಯನ್ನು ಪೂರೈಸಿರಬೇಕಿತ್ತು. ಇದರಿಂದ ಅಂಗನವಾಡಿ, ಎಲ್ ಕೆಜಿ, ಯುಕೆಜಿಗಳಲ್ಲಿ ಜೊತೆಗೆ ಇದ್ದು ತನ್ನ ಸಹಪಾಠಿ ಮಗು ಒಂದನೇ ತರಗತಿಗೆ ತೇರ್ಗಡೆ ಆಗುವಾಗ ಪ್ರಾಯದಲ್ಲಿ ಬರಿ 10, 20 ದಿನಗಳ ಅಂತರವಿರುವ ಮಗು ಮುಂದಿನ ಹಂತಕ್ಕೆ ತೇರ್ಗಡೆಯ ಅವಕಾಶ ಇಲ್ಲ ಅಂದಾಗ ಮಗುವಿನ ಮಾನಸಿಕ ಸ್ಥಿತಿ ಮತ್ತು ವಿದ್ಯಾಭ್ಯಾಸದಲ್ಲಿ ವ್ಯತ್ಯಾಸ ಆಗಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದ್ದರಿಂದ 2025 ನೇ ಸಾಲಿನಲ್ಲಿ ಶಾಲೆಗಳು ಶೀಘ್ರದಲ್ಲಿ ಪುನಃ ಆರಂಭವಾಗಲಿದ್ದು ಸರ್ಕಾರ ಕೂಡಲೇ ಜೂನ್ ತಿಂಗಳಲ್ಲಿ ಹುಟ್ಟಿದ ಮಗುವಿಗೆ ಯುಕೆಜಿ ಯಿಂದ 1ನೇ ತರಗತಿಗೆ ಮುನ್ನಡೆಯಲು ಸರಕಾರ ರಿಯಾಯಿತಿ ಕೊಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಇವರು ಇಲಾಖಾ ಸಂಬಂಧಿತರಿಗೆ ಸಾಕಷ್ಟು ಮನವಿ ಮಾಡಿದ್ದರು.

ಇಂದು ಆ ಮನವಿಗೆ ಫಲಶೃತಿಯಾಗಿ ಶಿಕ್ಷಣ ಸಚಿವರು ಇದೀಗ ವಯೋಮಿತಿಯ ಮಾನದಂಡವನ್ನು ಸಡಿಲಿಸಿದ್ದಾರೆ.
5 ವರ್ಷ 5 ತಿಂಗಳು ವಯೋಮಾನವನ್ನು ಪೂರೈಸಿದ್ದ ಮಕ್ಕಳು 1ನೇ ತರಗತಿಗೆ ದಾಖಲಾಗಬಹುದಾಗಿದೆ. ಆದಾಗ್ಯೂ ಸಂಪೂರ್ಣ ಆರು ವರ್ಷ ಪೂರೈಸಿರದ ಮಕ್ಕಳು 1ನೇ ತರಗತಿಗೆ ದಾಖಲಾಗಲು ಅವರು ಯುಕೆಜಿ ಕಲಿತಿರಬೇಕು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

“ಎಲ್‌ಕೆಜಿ, ಯುಕೆಜಿಯಲ್ಲಿ ಕಲಿತಿದ್ದರೆ ಮಾತ್ರವೇ 5 ವರ್ಷ 5 ತಿಂಗಳು ಆಸುಪಾಸಿನ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಈ ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ವಯೋಮಿತಿ ಸಡಿಲಿಕೆಯು ಈ ವರ್ಷಕ್ಕೆ ಮಾತ್ರವೇ ಅನ್ವಯವಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...