ಉಡುಪಿ | ಸಾಲಿಗ್ರಾಮದಲ್ಲಿ ಅನಧಿಕೃತ ಘನ ತ್ಯಾಜ್ಯ ಘಟಕ ನಿರ್ಮಾಣ, ಪ್ರತಿಭಟನೆಯ ಎಚ್ಚರಿಕೆ

Date:

ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ನ್ಯಾಯಾಲಯದ ಆದೇಶವನ್ನೂ ಮೀರಿ ಅನಧಿಕೃತ ಕಟ್ಟಡದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಘನ ತ್ಯಾಜ್ಯ ಘಟಕವನ್ನು ಉದ್ಘಾಟಿಸಲಾಗಿದೆ. ಇದರಿಂದ ಸುಮಾರು 1.80 ಕೋಟಿ ರು.ಗೂ ಮಿಕ್ಕಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ ಕಾನೂನುಬಾಹಿರ ಜನವಿರೋಧಿ ಘಟಕದ ವಿರುದ್ಧ ಹೋರಾಟ ನಡೆಸುತ್ತಿರುವ ಸ್ಥಳೀಯರಾದ ನಾಗೇಂದ್ರ ಪುತ್ರನ್ ಹಾಗೂ ಮಹೇಶ್ ಪೂಜಾರಿ ಪಾರಂಪಳ್ಳಿ ಅವರು, ಸ್ಥಳೀಯ ವಿರೋಧದ ನಡುವೆಯೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉದ್ಘಾಟಿಸಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಘಟಕ ಸ್ಥಾಪಿಸಿರುವ 104 – 24, 25 ಸರ್ವೆ ನಂಬರ್ ಭೂಪರಿವರ್ತನೆಯಾಗಿಲ್ಲ, ಇಖಾತಾವೂ ಆಗಿಲ್ಲ, ಆದರೂ ಸಾಲಿಗ್ರಾಮ ಪಪಂ ಈ ಭೂಮಿಯನ್ನು ಖರೀದಿಸಿದ್ದು ಭೂಕಂದಾಯ ಕಾಯ್ದೆ 1964ರಡಿ ಅಕ್ರಮವಾಗಿದೆ. ಈ ಘಟಕವು ನದಿ ಪಕ್ಕದಿಂದ 50 ಮೀಟರ್ ವ್ಯಾಪ್ತಿಯೊಳಗೆ ಇರುವುದರಿಂದ ಸಿಆರ್‌ಝಡ್ ನಿಮಯ ಉಲ್ಲಂಘನೆಯಾಗಿದೆ. ಆದ್ದರಿಂದ ಸಿಆರ್‌ಝಡ್‌ನಿಂದ ಅನುಮತಿ ಸಿಕ್ಕಿಲ್ಲ, ಆದ್ದರಿಂದ ಈ ಘಟಕ ನಿರ್ಮಾಣ ಕಾನೂನು ಪ್ರಕಾರ ಅಪರಾಧವಾಗಿದೆ. ಈ ಜಮೀನಿಗೆ ತೆರಳುವ ರಸ್ತೆ ಕೂಡ ಪಂಚಾಯತ್ ಅಥವಾ ಸರ್ಕಾರಿ ರಸ್ತೆಯಲ್ಲ ಎಂದವರು ಆರೋಪಿಸಿದರು.

2013ರಲ್ಲಿಯೇ ಅಂದಿನ ಜಿಲ್ಲಾಧಿಕಾರಿ ರೇಜು ಅವರು ಈ ಕಟ್ಟಡವನ್ನು ಅನಧಿಕೃತ ಎಂದು ಘೋಷಿಸಿದ್ದಾರೆ. ಈ 104 -24, 25 ಸರ್ವೆ ನಂಬರ್ ನಲ್ಲಿರುವ ಕಟ್ಟಡ ಕಾನೂನುಬಾಹಿರ ಎಂದು ಕುಂದಾಪುರ ಜೆಎಂಸಿ ನ್ಯಾಯಾಲಯ ತೀರ್ಪು ನೀಡಿ, ಮಾಲಕನಿಗೆ 15 ಸಾವಿರ ರು. ದಂಡ ವಿಧಿಸಿದೆ. ಈ ಘಟಕ ಸ್ಥಾಪನೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಪರವಾನಿಗೆ ಪಡೆಯಲಾಗಿಲ್ಲ, ಈ ಸರ್ವೆ ನಂಬರಿನ ಭೂಮಿ ಖರೀದಿಯಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದವರು ದಾಖಲೆಗಳನ್ನು ಬಿಡುಗಡೆ ಮಾಡಿದರು.

ಅಧಿಕಾರಿಗಳು ಎಲ್ಲಾ ಗೊತ್ತಿದ್ದು ಜನಪ್ರತಿನಿಧಿಗಳನ್ನು ದಾರಿತಪ್ಪಿಸಿದ್ದಾರೆ. ಸ್ಥಳೀಯ ಜನಜೀವನದ ಮೇಲೆ ಮತ್ತು ನದಿಯ ನೀರಿನ ಮೇಲೆ ದುಷ್ಪರಿಣಾಮ ಬೀರಲಿರುವ ಈ ಘಟಕದ ವಿರುದ್ಧ ಹೋರಾಟ ಮುಂದುವರಿಯುತ್ತದೆ ಎಂದು ಹೋರಾಟಗಾರ ನಾಗೇಂದ್ರ ಪುತ್ರನ್ ಹೇಳಿದರು.

ಸ್ಥಳೀಯರಾದ ಅಶೋಕ್ ಪೂಜಾರಿ, ಗಣಪತಿ, ಗಣೇಶ ಸಾಲಿಗ್ರಾಮ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು ‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...