ಉಡುಪಿ | ರಾಷ್ಟ್ರದ ಗೌರವ ಕಾಪಾಡುವಲ್ಲಿ ಚೆನ್ನಮ್ಮರ ಬದುಕು ಸಮರ್ಪಣೆ : ಕೋಟ ಶ್ರೀನಿವಾಸ್ ಪೂಜಾರಿ

Date:

ರಾಷ್ಟ್ರಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದು ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟçದ ಗೌರವವನ್ನು ಕಾಪಾಡುವಲ್ಲಿ ತಮ್ಮ ಬದುಕನ್ನು ಸಮರ್ಪಣೆ ಮಾಡಿದರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

- Advertisement -

ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಿತ್ತೂರು ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೇಶದಲ್ಲಿ ಸ್ವಾತಂತ್ರದ ಕಿಚ್ಚು ಹಚ್ಚಿದ ಚೆನ್ನಮ್ಮ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಸಂಘಟನ ಶಕ್ತಿಯನ್ನು ಬೆಳೆಸಿ, ಭಾರತದ ಸ್ವಾತಂತ್ರದ ಹೋರಾಟದ ಪ್ರಥಮ ಮಹಿಳೆಯರ ಸಾಲಿಗೆ ಸೇರ್ಪಡೆಗೊಂಡು ಆದರ್ಶಮಯ ವ್ಯಕ್ತಿಯಾಗಿ, ಶಕ್ತಿಯಾಗಿ, ಮಹಿಳೆಯರಿಗೆ ಸ್ಫೂರ್ತಿಯಾದರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಎ ಸುವರ್ಣ, ದೇಶ ಕಟ್ಟುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಚಾರ ಹಾಗೂ ಬದುಕಿದ ರೀತಿ ಅವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು ಎಂದರು.

ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ್ ಯು.ಸಿ ಕಿತ್ತೂರು ರಾಣಿ ಚೆನ್ನಮ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ, ಜಗನ್ನಾಥ ಪಣಸಾಲೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ಬಿ ಕೋಟ್ಯಾನ್ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...