ಉಡುಪಿ | ಹೆದ್ದಾರಿ ಅಗಲೀಕರಣದಿಂದ ಕುಡಿಯುವ ನೀರಿಗೆ ತೊಂದರೆ, ಪೈಪ್‌ಲೈನ್ ದುರಸ್ತಿಗೆ ಎನ್‌ಎಚ್‌ಎಐಗೆ ಸೂಚನೆ

Date:

ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆಯಲ್ಲಿ ಆದ ಸಮಸ್ಯೆಯ ಬಗ್ಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...
WhatsApp Image 2026 01 01 at 5.58.29 PM

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಕುಂದಾಪುರ ತಾಲೂಕಿನ ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ ಹಾಗೂ ಬ್ರಹ್ಮಾವರದ ಸಾಲಿಗ್ರಾಮ, ಕೋಟತಟ್ಟು, ಕೋಟ, ಮಣೂರು, ಪಾಂಡೇಶ್ವರ ಹಾಗೂ ಸಾಸ್ತಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ಕೈಗೊಂಡಿರುವ ಸಾರ್ವಜನಿಕ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್‌ಗಳು ಹಾನಿಗೊಂಡು ಸಾರ್ವಜನಿಕರ ಕುಡಿಯುವ ನೀರಿಗೆ ತೊಂದರೆ ಉಂಟಾಗುತ್ತಿದೆ. ಇವುಗಳ ದುರಸ್ಥಿ ಕಾರ್ಯಗಳನ್ನು ಆದ್ಯತೆಯ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದರು.

ಅಗಲೀಕರಣ ಕಾಮಗಾರಿಯಿಂದ ಮುಂಬರುವ ದಿನಗಳಲ್ಲಿ ಪೈಪ್‌ಲೈನ್ ಹಾನಿಗೊಳಗಾಗುವ ಸಾಧ್ಯತೆಗಳಿವೆ. ಅಲ್ಲದೇ ಪೈಪ್‌ಲೈನ್‌ಗಳು ರಸ್ತೆ ಕ್ಯಾರೇಜ್ ವೇ ಮಧ್ಯದಲ್ಲಿ ಬರುತ್ತಿರುವುದರಿಂದ ಪ್ರತ್ಯೇಕ ಪೈಪ್‌ಲೈನ್ ಅಳವಡಿಕೆ ಅವಶ್ಯಕತೆ ಇದೆ. ದುರಸ್ಥಿ ಹಾಗೂ ಪ್ರತ್ಯೇಕ ಪೈಪ್‌ಲೈನ್ ಅಳವಡಿಕೆಗೆ ಗ್ರಾಮ ಪಂಚಾಯತ್ ಗಳಲ್ಲಾಗಲಿ, ಗ್ರಾಮೀಣಾಭೀವೃದ್ಧಿ ಇಲಾಖೆಯಿಂದ ಅನುದಾನದ ಲಭ್ಯತೆ ಇಲ್ಲದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದುರಸ್ಥಿ ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದರು.

ಹಾಲಿ ರಸ್ತೆ ಮಧ್ಯ ಭಾಗದಲ್ಲಿರುವ ಪೈಪ್‌ಲೈನ್‌ಗಳ ಬದಲಿಯಾಗಿ ಹೊಸದಾಗಿ ಪೈಪ್‌ಲೈನ್ ಕಾಮಗಾರಿಗಳನ್ನು ಸರ್ವೀಸ್ ರಸ್ತೆಯಲ್ಲಿ ಬಾಕಿ ಉಳಿದಿರುವ 2.5 ಮೀಟರ್ ಜಾಗದಲ್ಲಿ ಅಳವಡಿಸುವುದು ಸೂಕ್ತ ಎಂದರು. ಪ್ರಸ್ತುತ ದುರಸ್ಥಿ ಸೇರಿದಂತೆ ಹೊಸ ಪೈಪ್‌ಲೈನ್‌ಗಳನ್ನು ಅಳವಡಿಸಲು ತಯಾರಿಸಿರುವ ಅಂದಾಜು ಪಟ್ಟಿಯ ವೆಚ್ಚ ಹೆಚ್ಚಿದ್ದು, ಈ ಬಗ್ಗೆ ಮರು ಪರಿಶೀಲಿಸಿ, ಸರಿಯಾಗಿ ಅಂದಾಜು ವೆಚ್ಚ ತಯಾರಿಸಿ ನೀಡಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರುಗಳಿಗೆ ತಿಳಿಸಿದ ಅವರು, ಇಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೈಗೊಂಡ ನಿರ್ಣಯದ ನಡವಳಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಭಾಗೀಯ ಕಚೇರಿಗೆ ಕಳುಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ ಹಾಗೂ ಎ. ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮೀಷನರ್ ರಶ್ಮಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆಯ ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...