ಉಡುಪಿ | ಕೈವಾರ ತಾತಯ್ಯನ ತತ್ವಾದರ್ಶಗಳು ಬದುಕಿಗೆ ಮಾದರಿಯಾಗಲಿ- ಸಂಸದ ಶ್ರೀನಿವಾಸ ಪೂಜಾರಿ

Date:

Advertisements

ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗಿನಾರೇಯಣರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡುತ್ತಿದ್ದರು.

1004703510

ಕೈವಾರ ತಾತಯ್ಯರು ತಮ್ಮ ಕಾಯಕದಿಂದಲೇ ಬದುಕನ್ನು ಕಟ್ಟಿಕೊಂಡು, ಭಾಷಾ ಹಾಗೂ ಬರಹಗಳ ಮೂಲಕ ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅನ್ಯರ ಬದುಕಿನ ಏಳಿಗೆಗಾಗಿ ಶ್ರಮಿಸಿದವರು. ಆಧ್ಯಾತ್ಮ ಚಿಂತನ ಮಂಥನ ನಡೆಸುವುದರಲ್ಲಿ ಕೈವಾರ ತಾತಯ್ಯರು ಚಾಣಾಕ್ಷತೆ ಹೊಂದಿದ್ದರು ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಸರ್ಕಾರವು ಸಂತರ, ವಚನಕಾರರ, ಶರಣರ ಹಾಗೂ ಇಂತಹ ಸಾಧಕರ ಜಯಂತಿಯನ್ನು ಆಚರಿಸಿ ಅವರ ಬದುಕಿನ ಬಗ್ಗೆ ಜನರಿಗೆ ಜ್ಞಾನವನ್ನು ಮೂಡಿಸುವ ಮಹತ್ವ ಕೆಲಸ ಮಾಡುತ್ತಿದೆ. ಪ್ರಸ್ತುತ ಸಮಾಜದಲ್ಲಿ ನ್ಯಾಯಾಂಗ, ಶಾಸಕಾಂಗ ಎಂಬ ವ್ಯವಸ್ಥೆ ಇದ್ದರೂ ಕೂಡ ಸಮಾನತೆ ಬಂದಿಲ್ಲ. ಸಮಾಜಕ್ಕೆ ನೀಡಿದ ಕೈವಾರ ತಾತಯ್ಯರ ಕೊಡುಗೆಗಳು ಎಲ್ಲರಿಗೆ ಪ್ರೇರಣೆಯಾಗಲಿ ಎಂದರು.

Advertisements

ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ.ಶ್ರೀಕಾಂತ್ ಸಿದ್ದಾಪುರ ವಿಶೇಷ ಉಪನ್ಯಾಸ ನೀಡಿ, ಕೈವಾರ ತಾತಯ್ಯರು ವೃತ್ತಿ ಜೀವನವನ್ನು ತೊರೆದು ಆಧ್ಯಾತ್ಮಿಕ ಹಾದಿಯನ್ನು ಹಿಡಿದರು. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಬೇಕಾದರೆ ಮನಸ್ಸನ್ನು ನಿಯಂತ್ರಣದಲ್ಲಿಡಬೇಕು ಹಾಗೂ ಜೀವನದಲ್ಲಿ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಸಭೆಯ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಆಡಳಿತ ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ವರ್ಷಾ ನಿರೂಪಿಸಿ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X