ಉಡುಪಿ | BSNL ಟವರ್ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ – ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

Advertisements

ಉಡುಪಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಅವರು ಮಂಗಳವಾರ ನಗರದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆಟ್ವರ್ಕ್ ಹಾಗೂ ಟವರ್ ಸಮಸ್ಯೆ ಕುರಿತು ಬಿ.ಎಸ್.ಎನ್.ಎಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ಗ್ರಾಮೀಣ ಭಾಗದ ಬಿ.ಎಸ್.ಎನ್.ಎಲ್ ಟವರ್‌ಗಳ ಸೇವೆ ಲಭ್ಯತೆ ಇದ್ದರೂ ಸಹ, ಪೂರ್ಣ ಪ್ರಮಾಣದಲ್ಲಿ ಅವುಗಳ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ಸಾರ್ವಜನಿಕ ದೂರುಗಳು ಕೇಳಿ ಬರುತ್ತಿವೆ. ಗ್ರಾಮೀಣ ಭಾಗದಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡುವುದರೊಂದಿಗೆ ನೆಟ್‌ವರ್ಕ್ಗಳ ಲಭ್ಯತೆಯಾಗಿ ಜನರು ಉಪಯೋಗಪಡಿಸಿಕೊಳ್ಳುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

Advertisements
1004613173

ಜಿಲ್ಲೆಯಲ್ಲಿ 196 ಬಿ.ಎಸ್.ಎನ್.ಎಲ್ ಟವರ್ ಗಳು ಕಾರ್ಯ ನಿರ್ವಹಿಸುತ್ತಿವೆ. 41 ಟವರ್‌ಗಳಿಗೆ 4 ಜಿ ಸಂಪರ್ಕ ನೀಡಲಾಗುತ್ತಿದೆ. 180 ಹೊಸ ಟವರ್‌ಗಳ ನಿರ್ಮಾಣಕ್ಕೆ ಈಗಾಗಲೇ ಬೇಡಿಕೆ ಇದ್ದು, 30 ಕ್ಕೆ ಅನುಮೋದನೆ ಸಿಕ್ಕಿದೆ. ಅವುಗಳ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಮಾಡಬೇಕು ಎಂದ ಅವರು, ಹಾಲಿ ಚಾಲ್ತಿಯಲ್ಲಿರುವ 196 ಟವರ್‌ಗಳ ಪೈಕಿ 75 ಟವರ್‌ಗಳಲ್ಲಿ ಬ್ಯಾಟರಿ ಸಮಸ್ಯೆಗಳಿವೆ. ಇವುಗಳಿಗೆ ಬ್ಯಾಟರಿಗಳ ಅಳವಡಿಕೆಯನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ತಿಳಿಸಿದರು.

ನೆಟ್ವರ್ಕ್ ಟವರ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇರುವ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು. ನೆಟ್‌ವರ್ಕ್ ಸಮಸ್ಯೆ ಕುರಿತು ಜನರು ಕರೆ ಮಾಡಿದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಬಿ.ಎಸ್.ಎನ್.ಎಲ್ ಸಂಪರ್ಕವನ್ನು ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ಕಡೆಯಲ್ಲಿಯೂ ಕಲ್ಪಿಸಲು ಅಧಿಕಾರಿಗಳು ಸಹಕಾರ ನೀಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ನೆಟ್ವರ್ಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ನಿರ್ಮಾಣವಾದ ಹೊಸ ಬಿ.ಎಸ್.ಎನ್.ಎಲ್ ಟವರ್‌ಗಳಿಗೆ ಆದಷ್ಟು ಶೀಘ್ರವಾಗಿ ಸಂಪರ್ಕವನ್ನು ಒದಗಿಸಲು ಮುಂದಾಗಬೇಕು. ಸರ್ವರ್‌ಗಳ ಸಾಮರ್ಥ್ಯ ಕಡಿಮೆ ಇರುವಲ್ಲಿ ಅದನ್ನು ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಮಾತನಾಡಿ, ಹೊಸದಾಗಿ ನೆಟ್ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಸರ್ವೇ ನಡೆಸುವ ಸಂದರ್ಭದಲ್ಲಿ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳು ಇರುವ ಪ್ರದೇಶಗಳಲ್ಲಿ ಸುರಕ್ಷಿತೆಯನ್ನು ಗುರುತಿಸಿ, ಅವರ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಟವರ್ ಸ್ಥಾಪನೆಗೆ ಮುಂದಾಗಬೇಕು ಎಂದರು.

4ಜಿ ಅಪ್ ಗ್ರೇಡೆಷನ್ ಪ್ರಗತಿ ಹಾಗೂ ಗ್ರಾಮೀಣ ಭಾಗಗಳಲ್ಲಿ ನೆಟ್ವರ್ಕ್ ಸಮಸ್ಯೆಯ ನಿವಾರಣೆಗೆ ಇರುವ ಸವಾಲುಗಳು ಹಾಗೂ ಸಾಧ್ಯತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಡಿ.ಎಫ್.ಓ ಗಣಪತಿ, ಬಿ.ಎಸ್.ಎನ್.ಎಲ್ ಅಧಿಕಾರಿಗಳಾದ ನವೀನ್ ಕುಮಾರ್ ಗುಪ್ತಾ, ಜನಾರ್ಧನ್, ಮಾಯಾದೇವಿ, ಗಪೂರ್, ಬಿಂದು ಪ್ರಕಾಶ್, ಕೃಷ್ಣಾ ನಾಯ್ಕ್, ಸಮಿತಿಯ ನಾಮ ನಿರ್ದೇಶಿತ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X