ಕಲಬುರಗಿ | ಕೆಪಿಎಂಇ ಕಾಯ್ದೆ ಉಲ್ಲಂಘನೆ : 55 ಜನರಿಗೆ 22.27 ಲಕ್ಷ ರೂ. ದಂಡ

Date:

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ-2007 ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲೆಯ 55 ಕ್ಲಿನಿಕ್ ಮತ್ತು ವೈದ್ಯರಿಗೆ ಒಟ್ಟು 22.27 ಲಕ್ಷ ರೂ. ದಂಡ ವಿಧಿಸಲು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

- Advertisement -

ಕೆಪಿಎಂಇ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 42 ಜನರಿಗೆ ತಲಾ 50 ಸಾವಿರ, 5 ಜನರಿಗೆ ತಲಾ 20 ಸಾವಿರ, 5 ಜನರಿಗೆ ತಲಾ 5 ಸಾವಿರ, ಇಬ್ಬರಿಗೆ ತಲಾ 1ಸಾವಿರ ದಂಡ ವಿಧಿಸಿ ಕೂಡಲೇ ದಂಡ ವಿಧಿಸಲು ಮಂಗಳವಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಪಿಎಂಇ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಇನ್ನುಳಿದಂತೆ 6 ಜನ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕಳೆದ ಡಿಸೆಂಬರ್‌ದಿಂದ ಜೂನ್‌ವರೆಗೆ ಸಹಾಯಕ ಆಯುಕ್ತರ ನೇತೃತ್ವದಲ್ಲಿ ತಪಾಸಣಾ ತಂಡ ನಿಯಮಿತ ದಾಳಿ ನಡೆಸಿ ಒಟ್ಟು 61 ಕ್ಲಿನಿಕ್ ಮತ್ತು ವೈದ್ಯರ ಮೇಲೆ ಕೆಪಿಎಂಇ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಇಲಾಖಾ ಎಫ್ಐಆರ್. ದಾಖಲಿಸಿ ಡಿ.ಸಿ. ಅಧ್ಯಕ್ಷತೆಯ ಕುಂದುಕೊರತೆ ಪ್ರಾಧಿಕಾರದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಅದರಂತೆ ಮಂಗಳವಾರ ಸಭೆಗೆ ಅಗಮಿಸಿದ ವೈದ್ಯರ ಅಹವಾಲು ಆಲಿಸಿ ಜಿಲ್ಲಾಧಿಕಾರಿಗಳು ದಂಡ ವಿಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಎಸ್ಪಿ ಚನ್ನಬಸವಣ್ಣ ಎಸ್.ಎಲ್. ವರ್ಗಾವಣೆ : ಪ್ರದೀಪ ಗುಂಟಿ ನೂತನ ಎಸ್ಪಿ

ಸಭೆಯಲ್ಲಿ ಡಿಎಚ್ಓ ಡಾ.ರತಿಕಾಂತ ಸ್ವಾಮಿ, ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ಗಿರಿಜಾ ನಿಗ್ಗುಡಗಿ ಸೇರಿದಂತೆ ಇನ್ನಿರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...