ಕಲಬುರಗಿ | ಸಾಲ ಮರುಪಾವತಿಗೆ ರೈತರಿಗೆ ನೋಟಿಸ್; ಬ್ಯಾಂಕ್‌ ಎದುರು ಕೆಪಿಆರ್‌ಎಸ್‌ ಪ್ರತಿಭಟನೆ

Date:

Advertisements

ಬರಗಾಲ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಯ ರೈತರಿಗೆ ಸಾಲ ವಸುಲಾತಿ ನೋಟಿಸ್‌ ಕೊಡುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ ನೀತಿ ಖಂಡನೀಯವಾಗಿದ್ದು, ಸರ್ಕಾರ ಮಧ್ಯೆ ಪ್ರವೇಶಿಸಿ ರೈತರ ಖಾತೆಗಳನ್ನು ಸ್ಥಗಿತ ಮಾಡಿದನ್ನು ಕೈ ಬಿಟ್ಟು ಕೂಡಲೇ ರೈತರ ನೆರವಿಗೆ ಧಾವಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ಕಾರ್ಯಕರ್ತರು ಆಗ್ರಹಿಸಿದರು.

ಕಲಬುರಗಿ ನಗರದ ಲೀಡ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬ್ಯಾಂಕ್ ವ್ಯವಸ್ಥಾಪಕರಿಗೆ ಸಲ್ಲಿಸಿದರು.

‌ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, “ರಾಷ್ಟ್ರೀಕೃತ ಬ್ಯಾಂಕುಗಳಿಂದ ಕೋಟ್ಯಾಂತರ ಸಾಲ ಪಡೆದು ಸಾಲ ಕಟ್ಟಲಾಗದೆ ಬ್ಯಾಂಕುಗಳು ದಿವಾಳಿ ಮಾಡಿದ ಅದಾನಿ, ಅಂಬಾನಿ ಸೇರಿದಂತೆ ಅನೇಕ ಬಂಡವಾಳಶಾಹಿಗಳ ಸಾಲ ವಸೂಲಿ ಮಾಡದೇ ಅವರ ಪರ ನಿಂತು ಅವರನ್ನು ರಕ್ಷಿಸಿದ್ದು ಕೇಂದ್ರ ಸರ್ಕಾರ, ಆದರೆ ರೈತರ ಕನಿಷ್ಠ ಸಾಲ ವಸೂಲಿಗೆ ಪದೇ ಪದೇ ನೋಟಿಸ್‌ ನೀಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಸಕಾಲಕ್ಕೆ ಮಳೆಯಾಗದೆ ರೈತರು ಬೆಳೆದ ಬೆಳೆ ಕೈಗೆ ಬಾರದಂತಾಗಿದೆ, ಇದರಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತ ಸಾಲ ಭಾದೆ ತಾಳದೆ ಆತ್ಮಹತ್ಯೆಗೆ ಶರಣಾಗಬೇಕಾದ ಪರಿಸ್ಥಿತಿ ಬಂದೊದಗಿದೆ. ರೈತರ ಆರ್ಥಿಕ ಪರಿಸ್ಥಿತಿ ಬಲಪಡಿಸುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿದರೂ ಬ್ಯಾಂಕ್‌ ಅಧಿಕಾರಿಗಳು ರೈತರಿಂದ ಸಾಲ ವಸುಲಾತಿಗೆ ಮುಂದಾಗಿರುವುದು ನ್ಯಾಯ ಸಮ್ಮತವಲ್ಲ, ಮೊದಲೇ ಸಂಕಷ್ಟದ ದಿನಗಳನ್ನು ದೂಡುತ್ತಿರುವ ರೈತರಿಂದ ಸಾಲ ವಸೂಲಿ ಮಾಡುವುದು ರೈತರ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ. ಕೇಂದ್ರ ಸರ್ಕಾರ ಮೀನಾಮೇಷ ಎಣಿಸದೇ ರೈತರ ಬೆಳೆ ಸಾಲ ಮನ್ನಾ ಮಾಡಬೇಕೆಂದು” ಒತ್ತಾಯಿಸಿದರು.

ರೈತರಿಗೆ ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಸಾಲ ವಸುಲಾತಿ ನೋಟಿಸ್ ಕೊಡುವುದು ನಿಲ್ಲಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ರೈತರ ನೆರವಿಗೆ ಬರಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಖಾತೆ ಸ್ಥಗಿತಗೊಳಿಸಿದ್ದು ಕೈ ಬಿಟ್ಟು ತಕ್ಷಣವೇ ರೈತರಿಗೆ ಅನುಕೂಲ ಮಾಡಿಕೊಡಬೇಕು. ಒಂದು ವೇಳೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಬ್ಯಾಂಕ್‌ ಗಳ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೋವಿಡ್ ಪಾಸಿಟಿವ್ ಬಂದವರಿಗೆ ಕಡ್ಡಾಯ 7 ದಿನ ಹೋಮ್ ಐಸೊಲೇಷನ್: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಮುಖರಾದ ಸುಭಾಷ್ ಹೊಸಮನಿ, ದಿಲೀಪ್ ನಾಗೂರೆ ,ಎಂ.ಬಿ.ಸಜ್ಜನ, ಪ್ರಕಾಶ ಜಾನೆ, ರೇವಣಸಿದ್ದಪ್ಪಾ ಪಾಟೀಲ್, ರಾಮಪ್ಪ ಹುರುಮುಂಜಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X