ರಾಜ್ಯದಲ್ಲಿ ಪ್ರಗತಿಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರೂ ಆಗಿದ್ದ ಕಾಮ್ರೆಡ್ ಜಿ.ಸಿ.ಬಯ್ಯಾರೆಡ್ಡಿ ಅವರು ನಿಧನರಾಗಿದ್ದಾರೆ.
ಶನಿವಾರ ಮುಂಜಾನೆ 3 ಗಂಟೆಗೆ ಜಯನಗರ 3ನೇ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೋಲಾರ ಜಿಲ್ಲೆಯವರಾಗಿದ್ದ ಬಯ್ಯಾರೆಡ್ಡಿ, ಈ ಹಿಂದೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರೂ ಆಗಿದ್ದರು. ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಅನಾರೋಗ್ಯದಿಂದ ಇದ್ದರೂ, ಮಧ್ಯೆ ಚೇತರಿಸಿಕೊಂಡು ಹೋರಾಟಗಳಲ್ಲಿ ಉಸಿರಾಟದ ಆಕ್ಸಿಜನ್ ಪೈಪ್ ಇಟ್ಟುಕೊಂಡೇ ಭಾಗಿಯಾಗುತ್ತಿದ್ದರು.

ಬಯ್ಯಾರೆಡ್ಡಿಯವರ ಪಾರ್ಥೀವ ಶರೀರವನ್ನು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾಲಕ್ಷ್ಮಿ ಲೇ ಔಟ್‌ನಲ್ಲಿರುವ ಸಿಪಿಐ(ಎಂ) ಪಕ್ಷದ ರಾಜ್ಯ ಕಚೇರಿ ಇಎಂಎಸ್ ಭವನದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಸಿಪಿಐ(ಎಂ) ರಾಜ್ಯ ಸಮಿತಿಯ ಕಾರ್ಯದರ್ಶಿ ಕೆ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
