ಮಂಡ್ಯ | ಜಮೀನಿಗೆ ನೀರು ಹರಿಸುವಂತೆ ಇಂಜಿನಿಯರ್‌ಗೆ ರೈತರ ದಿಗ್ಬಂಧನ

Date:

Advertisements

ಹೇಮಾವತಿ ನದಿಗೆ ಕೆ.ಆರ್‌ ಪೇಟೆ ತಾಲೂಕಿನ ಹೇಮಗಿರಿ ಬಳಿ ಕಟ್ಟಿರುವ ಒಡ್ಡಿನಿಂದ (ಅಣೆಕಟ್ಟೆ) ವಿಠಲಾಪುರ ಭಾಗದ ಜಮೀನುಗಳಿಗೆ ನೀರು ಹರಿಸಬೇಕು. ಬೆಳೆಯುತ್ತಿರುವ ಭತ್ತದ ಫಸಲನ್ನು ರಕ್ಷಿಸಲು ಅನುವು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಹಲವಾರು ರೈತರು ಹೇಮಾವತಿ ಉಪವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್ ಅವರಿಗೆ ದಿಗ್ಬಂಧನ ಹಾಕಿದ್ದಾರೆ.

ಹೇಮಾವತಿ ಅಣೆಕಟ್ಟೆಯಿಂದ ತ್ರಿಶೂಲ್ ಜಲ ವಿದ್ಯುತ್ ಉತ್ಪಾದನಾ ಘಟಕಕ್ಕೆ ಯಥೇಚ್ಛವಾಗಿ ನೀರು ಹರಿಸುತ್ತಿದ್ದು, ವಿದ್ಯುತ್ ಉತ್ಪಾದನೆಯ ನಂತರ ಬಳಸಿದ ನೀರು ನದಿಯ ಮೂಲಕ ಕೃಷ್ಣರಾಜಸಾಗರ ಜಲಾಶಯಕ್ಕೆ ಸೇರುತ್ತಿದೆ. ಆದರೆ, ಹೇಮಗಿರಿ ಅಣೆಕಟ್ಟೆಯ ನಾಲಾ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ನೂರಾರು ಎಕರೆ ಭೂ ಪ್ರದೇಶದಲ್ಲಿ ಕಬ್ಬು ಮತ್ತು ಭತ್ತವನ್ನು ಬೆಳೆಯಲಾಗಿದ್ದು, ಭತ್ತವು ಗರ್ಭ ಕಟ್ಟಿ ತೆನೆಯಾಗುವ ಈ ಸಮಯದಲ್ಲಿ ನಾಲೆಯಲ್ಲಿ ನೀರು ಹರಿಯದಿರುವುದರಿಂದ ಭತ್ತದ ಫಸಲು ಕೈಗೆ ಬಂದದ್ದು ಬಾಯಿಗೆ ಬರದಂತಾಗಿದೆ ಎಂದು ರೈತರು ದೂರಿದರು.

ಕಳೆದ ಮೂರು ನಾಲ್ಕು ತಿಂಗಳುಗಳಿಂದ ಬೇಸಾಯ ಮಾಡಿ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿರುವ ರೈತ ಬಾಂಧವರು ಭತ್ತದ ಫಸಲು ಗರ್ಭ ಕಟ್ಟಿ ಕಾಳಾಗುವ ಸಂದರ್ಭದಲ್ಲಿ ನೀರು ಹರಿಸದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಅಭಿಯಂತರರು ಹಾಗೂ ನಂಬರ್ 20 ಉಪವಿಭಾಗ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಇಂಜಿನಿಯರ್ ಗಳು ನಾಲೆಯಲ್ಲಿ ನೀರು ಹರಿಸಲು ಕ್ರಮ ಕೈಗೊಂಡು ಒಣಗುತ್ತಿರುವ ಭತ್ತದ ಬೆಳೆಯನ್ನು ರಕ್ಷಣೆ ಮಾಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

Advertisements

ವಿಠಲಾಪುರ, ಕೂಡಲಕುಪ್ಪೆ, ಪರದೇಶಗೌಡನ ಕೊಪ್ಪಲು ಯಗಚಗುಪ್ಪೆ ಗ್ರಾಮಗಳ ವ್ಯಾಪ್ತಿಯ ನೂರಾರು ಎಕರೆ ಭೂ ಪ್ರದೇಶದಲ್ಲಿ ಭತ್ತವನ್ನು ಬೆಳೆದಿರುವ ರೈತಬಾಂಧವರು ಹೇಮಗಿರಿ ನಾಲೆಯಲ್ಲಿ ನೀರು ಹರಿಯದಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾಲೆಯ ನೀರು ನಿರ್ವಹಣಾ ಜವಾಬ್ದಾರಿಯನ್ನು ಹೊತ್ತಿರುವ ಸವಡೆಗಳು ಬೇಜವಾಬ್ದಾರಿತನದಿಂದ ಕೆಲಸ ಮಾಡುತ್ತಿದ್ದು ಈ ಭಾಗದ ಸವಡೆಗಳನ್ನು ಕೂಡಲೇ ಬದಲಾಯಿಸಿ ನಾಲೆಯ ನೀರು ಕೊನೆಯ ಭಾಗದ ಗದ್ದೆಗಳಿಗೆ ಹರಿಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ವಿಠಲಾಪುರ ಸುಬ್ಬೆಗೌಡ, ರಾಜಶೇಖರ್, ನಾರಾಯಣಗೌಡ, ನರಸಿಂಹೇಗೌಡ, ಮೋಹನ, ಪಾಂಡುರಂಗೇಗೌಡ ಸೇರಿದಂತೆ ನೂರಾರು ರೈತರು ಸಹಾಯಕ ಕಾರ್ಯಪಾಲಕ ಅಭಯಂತರ ವಿಶ್ವನಾಥ್ ಅವರಿಗೆ ದಿಗ್ಬಂದನ ಹಾಕಿ, ನೀರಾವರಿ ಇಲಾಖೆ ಇಂಜಿನಿಯರ್ ಗಳ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X