ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

Date:

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಹಾಗೂ ಗ್ರಾಮದ ಪ್ರಮುಖರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಲಾ ಆಸ್ತಿಯನ್ನು ಉಳಿಸಿಕೊಡುವಂತೆ ಕೋರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ.

- Advertisement -

ಗ್ರಾಮದ ನಿವಾಸಿಗಳಾದ ಬಲರಾಮನಾಯಕ ಮತ್ತು ಅವರ ಪುತ್ರ ಜ್ಞಾನಪ್ರಕಾಶ್ ಎಂಬುವವರು ಶಾಲಾ ಆವರಣಕ್ಕೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭಿಸಿದ್ದಾರೆ ಎಂದು ಆರೋಪಿಸಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅತಿಕ್ರಮಣದಿಂದಾಗಿ ಶಾಲೆಯ ಶೈಕ್ಷಣಿಕ ಪರಿಸರಕ್ಕೆ ಧಕ್ಕೆಯಾಗುತ್ತಿದ್ದು, ಮಕ್ಕಳ ಆಟದ ಮೈದಾನ ಹಾಗೂ ಶಾಲೆಯ ಭವಿಷ್ಯದ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಾರ್ವಜನಿಕ ಆಸ್ತಿಯನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ತಕ್ಷಣವೇ ನಡೆಯುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಿ ಶಾಲಾ ಆಸ್ತಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಒತ್ತಾಯವಾಗಿದೆ. ಫೆಬ್ರವರಿ 20, 2026ರಂದು ಸಲ್ಲಿಸಲಾದ ದೂರು ಪತ್ರಕ್ಕೆ ಶಾಲಾ ಉಸ್ತುವಾರಿ ಸಮಿತಿಯ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಸದರಿ ಗ್ರಾಮಸ್ಥರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಈ ಒತ್ತುವರಿ ತಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈಗ ಸರ್ಕಾರದ ಹಂತದಲ್ಲಿ ಸಚಿವರ ಮಧ್ಯಪ್ರವೇಶವನ್ನು ಗ್ರಾಮಸ್ಥರು ಕೋರಿದ್ದಾರೆ. ಒಂದು ವೇಳೆ ಈ ಅಕ್ರಮ ನಿರ್ಮಾಣಕ್ಕೆ ಬ್ರೇಕ್ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮದ ಸಮಸ್ತ ನಾಗರಿಕರೊಂದಿಗೆ ಸೇರಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದ್ದು, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಮನವಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ದಾಳಿ: ಶೋಕದಲ್ಲಿ ಮುಳುಗಿದ ಅಲಿಪುರ, ಅಮೆರಿಕಕ್ಕೆ ಧಿಕ್ಕಾರ ಘೋಷಣೆ

ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಕೆ. ತಿಮ್ಮೆಗೌಡ, ತಹಶೀಲ್ದಾರ್ ಡಾ. ಎಸ್. ಯು. ಅಶೋಕ್ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿ ಸೂಕ್ತಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...