ಉಡುಪಿ | ಸರಕಾರದ ಹೆಸರು ಕೆಡಿಸುವ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವುದಿಲ್ಲ – ಕೃಷ್ಣ ಶೆಟ್ಟಿ

Date:

Advertisements

ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರಕಾರದ ಹೆಸರು ದುರುಪಯೋಗ ಪಡಿಸಿಕೊಂಡು ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು, ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಮಾಡುವವರ ವಿರುದ್ಧ ಸಂಬಂದಪಟ್ಟ ಇಲಾಖೆಯವರು ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು. ಸೂಕ್ತ ಪರವಾನಗಿ ಇಲ್ಲದೇ ಸರ್ಕಾರದ ರಾಯಧನಕ್ಕೆ ಧಕ್ಕೆ ಉಂಟು ಮಾಡುವಂತಹ ಅಕ್ರಮ ದಂಧೆಗಳಲ್ಲಿ ಭಾಗಿಯಾಗುತ್ತಿದ್ದಲ್ಲಿ ಅಂತವರ ವಿರುದ್ದ ಸಂಬಂಧ ಪಟ್ಟ ಇಲಾಖೆಗಳು ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಸಮಿತಿಯು ಉಡುಪಿ ಜಿಲ್ಲೆಯಾದ್ಯಂತ ಯುವ ಸಮುದಾಯವನ್ನು ಸಂಘಟಿಸಿ ಒಗ್ಗಟ್ಟಿನಿಂದ ಸಾಮಾಜಿಕ ಕಳಕಳಿಯುಳ್ಳ ಸಮಾಜಮುಖಿ ಕಾರ್ಯಗಳು, ಧಾರ್ಮಿಕ ಕಾರ್ಯಕ್ರಮಗಳು, ಯುವ ಸಮುದಾಯಕ್ಕೆ ಉದ್ಯೊಗ ಸೃಷ್ಟಿಯ ಕುರಿತು ಚಿಂತನೆ, ಸಮಾಜದ ಕಟ್ಟಕಡೆಯ ಹಾಗೂ ಶೋಷಿತರ ದ್ವನಿಯಾಗುತ್ತದೆಯೇ ವಿನಹ ಅಕ್ರಮ ದಂಧೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ.

ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಯುವ ಕಾಂಗ್ರೆಸ್ ಸಮಿತಿಯು ಅಕ್ರಮ ಚಟುವಟಿಕೆಗಳನ್ನು ಹದ್ದುಬಸ್ತಿಗೆ ತರಲು ಶ್ರಮಿಸುತ್ತದೆ. ಯಾವುದೇ ಕಾರಣಕ್ಕೂ ಯಾರಿಂದನೂ ಕಾಂಗ್ರೆಸ್ ಸರಕಾರಕ್ಕೆ ಕೆಟ್ಟ ಹೆಸರು ತರಲು ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕೃಷ್ಣ ಶೆಟ್ಟಿ ಬಜಗೋಳಿಯವರು ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷರಾದ ಬಳಿಕದ ತಮ್ಮ ಪ್ರಪ್ರಥಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X