ಕೆ ಆರ್ ಪೇಟೆ | ನೌಕರರು ಆರೋಗ್ಯ ಸ್ವಾಸ್ತ್ಯ ಕಾಪಾಡಿಕೊಳ್ಳಬೇಕು: ಆರ್ ದಯಾನಂದಕುಮಾರ್

Date:

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಬಣ್ಣೇನಹಳ್ಳಿ ಗ್ರಾಮದಲ್ಲಿರುವ ಫೆವರಿಚ್ ಗ್ರೂಪ್‌ನ ಮೆಗಾ ಫುಡ್‌ಪಾರ್ಕ್‌ನಲ್ಲಿ ರೋಟರಿ ಬೆಂಗಳೂರು, ಮಹಾಲಕ್ಷ್ಮಿ ಸೆಂಟ್ರಲ್ ಸಹಯೋಗದಲ್ಲಿ ಆವರಣದಲ್ಲಿರುವ ಉದ್ಯಮಗಳ ನೌಕರರು, ಕುಟುಂಬ ಸದಸ್ಯರಿಗೆ ಏರ್ಪಡಿಸಿದ್ದ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಫೆವರಿಚ್ ಗ್ರೂಪ್‌ನ ಉಪಾಧ್ಯಕ್ಷ ಆರ್. ದಯಾನಂದಕುಮಾರ್ ನೌಕರರು ಆರೋಗ್ಯ ಸ್ವಾಸ್ಥ್ಯವನ್ನು ಕಾಪಾಡಿಕೊಂಡು, ಉದ್ಯಮಗಳ ಬೆಳವಣಿಗೆಗೆ ಕೊಡುಗೆ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹೇಳಿದರು.

- Advertisement -

ಫೆವರಿಚ್ ಗ್ರೂಪ್‌ಗೆ 40 ವರ್ಷದ ಅನುಭವವಿದೆ. ಸಣ್ಣ ಉದ್ಯಮದಿಂದ ದೊಡ್ಡ ಉದ್ಯಮವಾಗಿ ಗ್ರೂಪ್ ನ ಅಧ್ಯಕ್ಷ ಜಯದೇವ ಬೆಳಸಿದ್ದಾರೆ. ಮೊದಲಿಗೆ ಕೃಷಿ ಸರಕು ವ್ಯಾಪಾರ, ಆಮದು, ರಫ್ತು ಹಾಗೂ ತಯಾರಿಕಾ ಕ್ಷೇತ್ರಗಳಿಗೆ ವಿಸ್ತರಣೆ ಆಗಿದೆ. ಈಗ ಕೃಷಿ ಹಾಗೂ ಆಹಾರ ಸಂಬಂಧಿತ ಉದ್ಯಮಕ್ಕೂ ಪಾದರ್ಪಣೆ ಮಾಡಿದೆ. ಗ್ರೂಪ್ ದೇಶದಲ್ಲಿ ಸ್ನ್ಯಾಕ್ ಆಹಾರ ಕಚ್ಚಾ ವಸ್ತುಗಳ ತಯಾರಿಕೆ ಹಾಗೂ ಪೂರೈಕೆ ಮಾಡುತ್ತಿದ್ದಾರೆ. ಪೆಪ್ಸಿಕೋ, ಪಾರ್ಲೆ, ಐಟಿಸಿ ಸೇರಿದಂತೆ ಹಲವು ಜಾಗತಿಕ ಸಂಸ್ಥೆಗಳಿಗೆ ಪೂರೈಸುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2014 ರಲ್ಲಿ ಹೊಸ ತಂತ್ರಜ್ಞಾನದಿಂದ ಮೂಲ ಸೌಕರ್ಯ ಕ್ಷೇತ್ರಕ್ಕೆ ಪ್ರವೇಶಿಸಿ, ಮೆಗಾ ಫುಡ್ ಪಾರ್ಕ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಿಸಲಾಗಿದ್ದು, ಉದ್ಯಮಿಗಳಿಗೆ ಸುಗಮ ಹಾಗೂ ತೊಂದರೆ ರಹಿತ ವಾತಾವರಣ ಒದಗಿಸುವುದು, ಭೂಮಿ ಹಂಚಿಕೆ, ಹೂಡಿಕೆ ಬೆಂಬಲ, ಮೂಲಭೂತ ಹಾಗೂ ಅಗತ್ಯ ಸೌಲಭ್ಯಗಳು ಹಾಗೂ ಕಾನೂನು ಅನುಮತಿಗಳ ಸಹಾಯ, ಫುಡ್ ಪಾರ್ಕ್‌ನಲ್ಲಿರುವ ಕೈಗಾರಿಕೆಗಳು ರೈತರಿಂದ ನೇರವಾಗಿ ಕಚ್ಚಾ ವಸ್ತುಗಳನ್ನು ಖರೀದಿಸುವ ಮೂಲಕ ಮಧ್ಯವರ್ತಿಗಳ ನಿವಾರಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದು, ಗ್ರಾಮೀಣ ಯುವಕರಿಗೆ ಸ್ಮಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ, ಜನಸಂದಣಿಯ ನಗರಗಳಿಗೆ ವಲಸೆ ಹೋಗುವದನ್ನು ತಡೆಯಲಾಗುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಡಿ.17 ರಿಂದ 21ರವರೆಗೆ ‘ನಿರಂತರ ರಂಗ ಉತ್ಸವ-2025’

ರೋಟರಿ ಸಂಸ್ಥೆಯ ಪಿಡಿಜಿ ಡಾ. ನಾಗೇಂದ್ರ, ಬೆಂಗಳೂರಿನ ಮಹಾಲಕ್ಷ್ಮಿ ಸೆಂಟರಲ್ ರೋಟರಿ ಅಧ್ಯಕ್ಷ ಪ್ರಶಾಂತ್ ರಾವ್, ಸಂಸ್ಥೆಯ ನಿರ್ದೇಶಕ ವಿಶಾಲ್ ನಾಯಡು, ಸಂಸ್ಥೆಯ ಅಧ್ಯಕ್ಷ ಜಯದೇವ್, ಕಾರ್ಯದರ್ಶಿ ಚಿರುದೀಪ್ ಶಿಬಿರದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...