ಕಳಪೆ ಕಾಮಗಾರಿ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಪಕ್ಷದಿಂದ ಆಗ್ರಹ ಮಾಡುತ್ತಿದ್ದೇವೆ. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದೆ. ಆ ಕಾರಣಕ್ಕಾಗಿ ಮಂಡ್ಯ ನಗರದ ಪ್ರಮುಖ ರಸ್ತೆಗಳು ಡಾಂಬರೀಕರಣಗೊಂಡಿವೆ. ಈ ಕಾಮಗಾರಿ ಕಳಪೆಯಾಗಿದೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ ಕುಮಾರ ಎಚ್ ಆರೋಪಿಸಿದ್ದಾರೆ.

ವಾಹನ ಸವಾರರಿಗೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಕೆಆರ್‌ಎಸ್ ಪಕ್ಷದ ಹೆಚ್ ಮಲ್ಲೇಗೌಡ ಜತೆಗೂಡಿ ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಮಾತನಾಡಿ, “ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ. ಈ ಕಾಮಗಾರಿಯಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.
“ಮಂಡ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಎರಡೂ ಬದಿಯಲ್ಲಿ ರಸ್ತೆ ಡಾಂಬರೀಕರಣ ಆಗಿದೆ. ಆದರೆ ಮೆರಿಡಿಯನ್, ಡಿವೈಡರ್‌ಗಳು ಹಾದು ಹೋಗುವ ಹಾಗೂ ಈ ಎರಡೂ ಬದಿಯ ರಸ್ತೆಗಳು ಸೇರುವ ಜಾಗದಲ್ಲಿ ಯಾವ ಕಾರಣಕ್ಕೆ ಡಾಂಬರೀಕರಣ ಮಾಡಿಲ್ಲ” ಎಂದು ಪ್ರಶ್ನಿಸಿದರು.
ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸರಿತಾ ಶಿವರಾಮು ಅವಿರೋಧ ಆಯ್ಕೆ
ಕೆಆರ್‌ಎಸ್ ಪಕ್ಷದ ಮಂಡ್ಯ ಪದಾಧಿಕಾರಿ ಮಲ್ಲೇಗೌಡ ಮಾತನಾಡಿ, “ಈ ರಸ್ತೆ ಕಾಮಗಾರಿಯನ್ನು ಸರಿಯಾಗಿ ನಿರ್ಮಾಣ ಮಾಡಿಲ್ಲ. ಈ ಕಾರಣದಿಂದ ಆಗಿರುವ ಅವ್ಯವಸ್ಥೆಗಳಿಂದ ಸಾರ್ವನಿಕರಿಗೆ ತೊಂದರೆಯಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಚಾಲನೆ ಮಾಡುವಂಥ ಸಂದರ್ಭದಲ್ಲಿ ರಸ್ತೆ ದಾಟುವಾಗ ಆಯತಪ್ಪಿ ಬೀಳುವ ಸಂಭವಗಳು ಜಾಸ್ತಿಯಿವೆ. ಆದಷ್ಟು ಬೇಗ ರಸ್ತೆ ಕಾಮಗಾರಿಯಲ್ಲಿ ಆಗಿರುವ ಅವ್ಯವಸ್ಥೆಗಳನ್ನು ಶೀಘ್ರ ಸರಿ ಪಡಿಸಬೇಕು” ಎಂದು ಒತ್ತಾಯಿಸಿದರು.
“ಕಳಪೆ ಕಾಮಗಾರಿಗೆ ಕಾರಣರಾದ ಪಿಡಬ್ಲ್ಯೂಡಿ ಇಲಾಖೆಯ ಕಾಂಟ್ರ್ಯಾಕ್ಟರ್ ಹಾಗೂ ಎಂಜಿನಿಯರ್‌ಗಳ ವಿರುದ್ಧ ಜಿಲ್ಲಾಡಳಿತ ಶಿಸ್ತುಕ್ರಮ ಜರುಗಿಸಬೇಕು” ಎಂದು ಕೆಆರ್‌ಎಸ್ ಪಕ್ಷದ ಪರವಾಗಿ ಆಗ್ರಹಿಸಿದರು.
ಇದನ್ನು ನೋಡಿದ್ದೀರಾ? ಬಾಡೂಟ ಅಪರಾಧ ಅಲ್ಲ ಸ್ವಾಮಿ, ಅದು ನಮ್ಮ ಪರಂಪರೆ
ಕೆಆರ್‌ಎಸ್ ಪಕ್ಷದ ಮಂಡ್ಯ ಜಿಲ್ಲಾ ಪದಾಧಿಕಾರಿಗಳು ಫೇಸ್ಬುಕ್ ಲೈವ್ ಮಾಡಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಗಮನ ಸೆಳೆಯುವ ಪ್ರಯತ್ನ ಮಾಡಿದರು.