ಮಂಡ್ಯ | ಕಳಪೆ ಕಾಮಗಾರಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಆಗ್ರಹ

Date:

ಕಳಪೆ ಕಾಮಗಾರಿ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಪಕ್ಷದಿಂದ ಆಗ್ರಹ ಮಾಡುತ್ತಿದ್ದೇವೆ. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದೆ. ಆ ಕಾರಣಕ್ಕಾಗಿ ಮಂಡ್ಯ ನಗರದ ಪ್ರಮುಖ ರಸ್ತೆಗಳು ಡಾಂಬರೀಕರಣಗೊಂಡಿವೆ. ಈ ಕಾಮಗಾರಿ ಕಳಪೆಯಾಗಿದೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ ಕುಮಾರ ಎಚ್ ಆರೋಪಿಸಿದ್ದಾರೆ.

- Advertisement -
IMG 20241216 194205 1

ವಾಹನ ಸವಾರರಿಗೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಕೆಆರ್‌ಎಸ್ ಪಕ್ಷದ ಹೆಚ್ ಮಲ್ಲೇಗೌಡ ಜತೆಗೂಡಿ ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಮಾತನಾಡಿ, “ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ. ಈ ಕಾಮಗಾರಿಯಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಮಂಡ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಎರಡೂ ಬದಿಯಲ್ಲಿ ರಸ್ತೆ ಡಾಂಬರೀಕರಣ ಆಗಿದೆ. ಆದರೆ ಮೆರಿಡಿಯನ್, ಡಿವೈಡರ್‌ಗಳು ಹಾದು ಹೋಗುವ ಹಾಗೂ ಈ ಎರಡೂ ಬದಿಯ ರಸ್ತೆಗಳು ಸೇರುವ ಜಾಗದಲ್ಲಿ ಯಾವ ಕಾರಣಕ್ಕೆ ಡಾಂಬರೀಕರಣ ಮಾಡಿಲ್ಲ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸರಿತಾ ಶಿವರಾಮು ಅವಿರೋಧ ಆಯ್ಕೆ

ಕೆಆರ್‌ಎಸ್ ಪಕ್ಷದ ಮಂಡ್ಯ ಪದಾಧಿಕಾರಿ ಮಲ್ಲೇಗೌಡ ಮಾತನಾಡಿ, “ಈ ರಸ್ತೆ ಕಾಮಗಾರಿಯನ್ನು ಸರಿಯಾಗಿ ನಿರ್ಮಾಣ ಮಾಡಿಲ್ಲ. ಈ ಕಾರಣದಿಂದ ಆಗಿರುವ ಅವ್ಯವಸ್ಥೆಗಳಿಂದ ಸಾರ್ವನಿಕರಿಗೆ ತೊಂದರೆಯಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಚಾಲನೆ ಮಾಡುವಂಥ ಸಂದರ್ಭದಲ್ಲಿ ರಸ್ತೆ ದಾಟುವಾಗ ಆಯತಪ್ಪಿ ಬೀಳುವ ಸಂಭವಗಳು ಜಾಸ್ತಿಯಿವೆ. ಆದಷ್ಟು ಬೇಗ ರಸ್ತೆ ಕಾಮಗಾರಿಯಲ್ಲಿ ಆಗಿರುವ ಅವ್ಯವಸ್ಥೆಗಳನ್ನು ಶೀಘ್ರ ಸರಿ ಪಡಿಸಬೇಕು” ಎಂದು ಒತ್ತಾಯಿಸಿದರು.

“ಕಳಪೆ ಕಾಮಗಾರಿಗೆ ಕಾರಣರಾದ ಪಿಡಬ್ಲ್ಯೂಡಿ ಇಲಾಖೆಯ ಕಾಂಟ್ರ್ಯಾಕ್ಟರ್ ಹಾಗೂ ಎಂಜಿನಿಯರ್‌ಗಳ ವಿರುದ್ಧ ಜಿಲ್ಲಾಡಳಿತ ಶಿಸ್ತುಕ್ರಮ ಜರುಗಿಸಬೇಕು” ಎಂದು ಕೆಆರ್‌ಎಸ್ ಪಕ್ಷದ ಪರವಾಗಿ ಆಗ್ರಹಿಸಿದರು.

ಇದನ್ನು ನೋಡಿದ್ದೀರಾ? ಬಾಡೂಟ ಅಪರಾಧ ಅಲ್ಲ ಸ್ವಾಮಿ, ಅದು ನಮ್ಮ ಪರಂಪರೆ

ಕೆಆರ್‌ಎಸ್ ಪಕ್ಷದ ಮಂಡ್ಯ ಜಿಲ್ಲಾ‌ ಪದಾಧಿಕಾರಿಗಳು ಫೇಸ್ಬುಕ್ ಲೈವ್ ಮಾಡಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...