ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ಎಲ್ಲ 14 ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಸಲಾಗಿದೆ.
ಸ್ವಚ್ಛ ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ರಾಜ್ಯದಲ್ಲಿ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವತಿಯಿಂದ 195 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. 2024ರ ಲೋಕಸಭಾ ಚುನಾವಣೆಗೆ ಈಗಾಗಲೇ 24 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಮೊದಲ ಹಂತದ ಚುನಾವಣೆಗೆ ಎಲ್ಲ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಯಾಗಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಎಲ್ ರಂಗನಾಥ್ ಗೌಡ ಅವರನ್ನು ಕೆಆರ್‌ಎಎಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿದ್ದು, ಇಂದು ನಾಮಪತ್ರ ಸಲ್ಲಿಕೆಯಾಗಿದೆ.
ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ, ದುರಾಡಳಿತದ ವಿರುದ್ಧ ಪಕ್ಷ ಹೋರಾಟ ಮಾಡುತ್ತಾ ಬಂದಿದ್ದು, ರಾಜ್ಯದ ಜನರಿಗೆ ಒಂದು ಒಳ್ಳೆಯ ಆಯ್ಕೆಯಾಗಿ ಇಂದು ಕೆಆರ್‌ಎಸ್ ಪಕ್ಷ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ʼಬಿಜೆಪಿ ಹಠವೋ ದೇಶ ಬಚವೋʼ ಘೋಷದೊಂದಿಗೆ ಸಿಪಿಐ ರಾಜಕೀಯ ಸಮಾವೇಶ
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್ ಜೀವನ್, ಸ್ಥಳೀಯ ಮುಖಂಡರುಗಳಾದ ಇಕ್ಬಾಲ್, ಸದಾಶಿವ ಹಾಗೂ ಪಕ್ಷದ ಇತರ ಪದಾಧಿಕಾರಿಗಳು ಇದ್ದರು.
