ಮಂಡ್ಯ | ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಮೂಲ ಸೌಕರ್ಯ ನೀಡುವಂತೆ ಆಗ್ರಹಿಸಿ ಕೆಆರ್‌ಎಸ್‌ ಪಾರ್ಟಿಯಿಂದ ಪ್ರತಿಭಟನೆ

Date:

ಶಾಲಾ, ಕಾಲೇಜು ಹಾಸ್ಟೆಲುಗಳಿಗೆ ನೀರನ್ನು ಒದಗಿಸುವ ಹೊಣೆ ಸ್ಥಳೀಯ ಪಂಚಾಯಿತಿ, ಸರ್ಕಾರದ್ದು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಮಕ್ಕಳು ತೊಂದರೆ ಪಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಸರಿಪಡಿಸಬೇಕು ಎಂದು ಕೆಆರ್‌ಎಸ್‌ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್‌ಗೌಡ ಆಗ್ರಹಿಸಿದರು.

- Advertisement -

ಅವರು ಮದ್ದೂರು ತಾಲೂಕಿನ ಕೆ ಎಂ ದೊಡ್ಡಿಯಲ್ಲಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಾಸ್ಟೆಲ್ ಬಾಲಕಿಯರಿಗೆ ಆಗುತ್ತಿರುವ ನೀರಿನ, ಊಟದ ಸಮಸ್ಯೆ ತಿಳಿದು ಇಲ್ಲಿಗೆ ಬಂದಿದ್ದೇವೆ. ಇಲ್ಲಿ ನಮ್ಮ ಗೆಳೆಯರ ಮಕ್ಕಳು ಓದುತ್ತಿದ್ದಾರೆ. ಇಲ್ಲಿ ಸರಿಯಾದ ಊಟದ, ನೀರಿನ ವ್ಯವಸ್ಥೆ ಇರುವುದಿಲ್ಲ. ಮೊದಲು ಸ್ಥಳೀಯ ಪಂಚಾಯಿತಿ ಹಾಗೂ ಹಿಂದುಳಿದ ವರ್ಗ ಇಲಾಖೆಯ ಅಧಿಕಾರಿಗಳು ಈ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

1001715678

ವಾರ್ಡನ್ ಚಂದ್ರಕಲಾ ಮಾತನಾಡಿ, ಇಲ್ಲಿ ನೀರಿನ ಸಮಸ್ಯೆ ಇರುವುದು ನಿಜ. ಹಾಸ್ಟೆಲ್ ಬಾಡಿಗೆ ಕಟ್ಟಡದಲ್ಲಿ ಇದೆ‌. ಕಳೆದ ಒಂದು ತಿಂಗಳಿನಿಂದ ಕೊಳವೆ ಬಾವಿ ಕೆಟ್ಟ ಕಾರಣ ನೀರಿಗೆ ತೊಡಕಾಗಿದೆ. 5 ಸಾವಿರ ನೀರಿನ ಟ್ಯಾಂಕಿನ ವ್ಯವಸ್ಥೆ ಇದೆ. ಪಂಚಾಯಿತಿಗೆ 20 ದಿನಗಳ ಹಿಂದೆ ನೀರಿನ ತೊಂದರೆಯ ಬಗ್ಗೆ ಪತ್ರ ಕೊಟ್ಟಿದ್ದೇವೆ. ಅವರು ಸರಿಪಡಿಸುವ ಭರವಸೆ ನೀಡಿದ್ದಾರೆ. ಕಟ್ಟಡದ ಮಾಲೀಕರು ಹೊಸ ಕೊಳವೆಬಾವಿ ಹಾಕಿಸಲು 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಶೀಘ್ರ ನೀರಿನ ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದರು.

ಪ್ರತಿಭಟನೆಯ ವಿಚಾರ ತಿಳಿದು ಸ್ಥಳೀಯ ಪಂಚಾಯಿತಿಯ ಪಿಡಿಒ ಸುಧಾ ಹಾಗೂ ಅದೇ ವಾರ್ಡಿನ ಪಂಚಾಯತಿ ಸದಸ್ಯರು ಆಗಮಿಸಿ, ನಮಗೆ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಇರಲಿಲ್ಲ. ಈಗ ತಿಳಿದು ಬಂದಿರುತ್ತದೆ. ಇನ್ನೆರಡು ದಿನಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಮುಂಚಿತವಾಗಿಯೇ ಸಮಸ್ಯೆ ಹೇಳಿದರೆ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಪ್ರತಿಭಟನೆಯಲ್ಲಿ ಕೆಆರ್‌ಎಸ್‌ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲೇಶ್, ಪ್ರಮೋದ್ ಮದ್ದೂರು ತಾಲ್ಲೂಕು ಅಧ್ಯಕ್ಷರು, ಮಹದೇವು ಕೂಳಗೆರೆ ಮಳವಳ್ಳಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ವಿಷಕಂಠಯ್ಯ, ರವೀಂದ್ರ ಕೊತ್ತತ್ತಿ, ವೆಂಕಟೇಶ್ ಕನಕಪುರ, ನಾಗರಾಜು ಸಾಸಲಾಪುರ, ಪುಟ್ಟಮಾಯಿಗ, ಮಾದೇಗೌಡ ಮಳವಳ್ಳಿ ಹಾಗೂ ಇನ್ನಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...