ಕೊಡಗು | ಗೌರಮ್ಮ ದತ್ತಿ ಪ್ರಶಸ್ತಿಗೆ ಭಾಜನರಾದ ಸಾಹಿತಿ ಪೂಜಾರಿರ ಕೃಪಾ ದೇವರಾಜ್

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡುವ ಪ್ರತಿಷ್ಠಿತ ಗೌರಮ್ಮ ದತ್ತಿ ಪ್ರಶಸ್ತಿಗೆ ಸಾಹಿತಿ ಪೂಜಾರಿರ ಕೃಪಾ ದೇವರಾಜ್ ಭಾಜನರಾಗಿದ್ದಾರೆ.

- Advertisement -

ಗೌರಮ್ಮರವರ ಪುತ್ರ ಬಿ.ಜಿ. ವಸಂತ ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ‌ಕೃತಿಗೆ ಪ್ರಶಸ್ತಿ ನೀಡುವ ಸಲುವಾಗಿ ಗೌರಮ್ಮ ದತ್ತಿ ಪ್ರಶಸ್ತಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 22 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದ್ದು, ‌2025-26ನೇ ಪ್ರಸಕ್ತ ಸಾಲಿನ 23ನೇ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದಾಗ 10 ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಪ್ರಸ್ತುತ ಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ, ಎಲ್ಲಾ ಪುಸ್ತಕಗಳನ್ನು ಪರಮರ್ಶಿಸಿ‌ ಸಾಹಿತಿ ಪೂಜಾರಿರ ಕೃಪಾ ದೇವರಾಜ್ ರಚಿಸಿದ ‘ಮಂತ್ರ ಪುಷ್ಪ-ಕಥೆಗಳ ಕ್ಯಾನ್ವಾಸ್’ ಕೃತಿಗೆ ಪ್ರಶಸ್ತಿ ಲಭ್ಯವಾಗಿದೆ ಎಂದು ಕಸಾಪ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಕುಶಾಲನಗರ | ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ ಜನಾಂಗಕ್ಕೆ ಸ್ಫೂರ್ತಿ: ಟಿ ಜಿ ಪ್ರೇಮ್ ಕುಮಾರ್

ಸಾಹಿತಿ ಮತ್ತು ಕವಿಯತ್ರಿಯಾಗಿರುವ ‌ ಪೂಜಾರಿರ ಕೃಪಾ ದೇವರಾಜ್ ರ ‘ಭಾವದ ಕದತಟ್ಟಿ’ ಕವನ ಸಂಕಲನ, ‘ಮರ್ಮರ’ ಕಥಾ ಸಂಕಲನಕ್ಕೆ ಆಜೂರ ಪ್ರತಿಷ್ಠಾನದ ಪ್ರತಿಷ್ಠಿತ ರಾಜ್ಯ ಮಟ್ಟದ ‘ಆಜೂರ’ ಪ್ರಶಸ್ತಿ ದೊರಕಿದೆ. ಚೌಚೌ ಬಾತ್ ಲಲಿತ ಪ್ರಬಂಧಗಳ ಸಂಕಲನ, ಕಾರ್ಪಣ್ಯದ ಹೂವು ಕವನ ಸಂಕಲನ, ಮಂತ್ರ ಪುಷ್ಪ ಕಥಾ ಸಂಕಲನ ಸೇರಿ 5 ಕೃತಿಗಳನ್ನು ರಚಿಸಿರುತ್ತಾರೆ. ಹಲವಾರು ಕವಿತೆಗಳನ್ನು ಕವಿಗೋಷ್ಠಿಗಳಲ್ಲಿ ವಾಚಿಸಿ, ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...