ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೆಎಸ್‌ಒಯು ಗೌರವ ಡಾಕ್ಟರೇಟ್

Date:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (ಕೆಎಸ್‌ಒಯು) ಜುಲೈ 2ರಂದು ನಡೆಯಲಿರುವ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್‌ಒಯು ಉಪಕುಲಪತಿ ಶರಣಪ್ಪ ವಿ ಹಲ್ಸೆ, “ಭಾರತದ 15ನೇ ರಾಷ್ಟ್ರಪತಿ ಮುರ್ಮು ಅವರು ಬುಡಕಟ್ಟು ಸಮುದಾಯದವರಾಗಿದ್ದು, ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್‌ಗೆ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ನಾವು ಘಟಿಕೋತ್ಸವ ಕಾರ್ಯಕ್ರಮಕ್ಕೆ ಬರುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇವೆ. ರಾಷ್ಟ್ರಪತಿಗಳ ಕಚೇರಿಯಿಂದ ನಮಗೆ ಇನ್ನೂ ದೃಢೀಕರಣ ಸಿಕ್ಕಿಲ್ಲ. ಆದರೆ, ರಾಷ್ಟ್ರಪತಿಗಳು ಜುಲೈ 3 ರಂದು ಬೆಂಗಳೂರಿನ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ. ನಾವು ರಾಜ್ಯಪಾಲರ ಕಚೇರಿಯಲ್ಲಿ ಅವರಿಗೆ ಪ್ರಶಸ್ತಿ ನೀಡುತ್ತೇವೆ” ಅವರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಿಕ್ಷಣತಜ್ಞರಾದ ಎನ್ ರಾಮಚಂದ್ರಯ್ಯ ಮತ್ತು ಎಸ್.ಎನ್ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ವಿಶ್ವವಿದ್ಯಾಲಯವು ಪ್ರಶಸ್ತಿ ನೀಡಲಿದೆ. ಜೊತೆಗೆ, ವಿದ್ಯಾರ್ಥಿಗಳಿಗೆ ಪಿಎಚ್‌ಡಿ, 44 ಚಿನ್ನದ ಪದಕಗಳು ಮತ್ತು 27 ನಗದು ಬಹುಮಾನ ಸೇರಿದಂತೆ ಹಲವಾರು ಪದವಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...