ಕೆಎಸ್‌ಆರ್‌ಟಿಸಿ ನರ್ಮ್‌ ಬಸ್‌ ಪುನಾರಂಭಿಸಲು ಆಗ್ರಹ; ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

Date:

Advertisements
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ ಮಂಜೂರಾಗಿದ್ದವು
  • ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್ ಸಂಚಾರ ಸೇವೆ ಮುಂದುವರಿಸ ಬೇಕು ಮತ್ತು ಬೇಡಿಕೆಗೆ ಅನುಗುಣವಾಗಿ ಹಲವು ಪ್ರದೇಶಗಳಿ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸ ಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ನರ್ಮ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ, ಮಂಜೂರಾದ 35 ಬಸ್ಸುಗಳಲ್ಲಿ 18 ಬಸ್ಸು ನಗರದ ಸ್ಟೇಟ್ ಬ್ಯಾಂಕ್ ಬಸ್‌ ನಿಲ್ದಾಣ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್‌ಗಳು ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಆರ್‌ಟಿಎ ಪ್ರಾಧಿಕಾರ ಸಭೆ ಒಪ್ಪಿಗೆ ನೀಡಿದ್ದವು ಎಂದು ಡಿವೈಎಫ್‌ಐ ಮುಖಂಡರು ವಿವರಿಸಿದ್ದಾರೆ.

ಆ ಸಂದರ್ಭ ಖಾಸಗಿ ಬಸ್ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದೆಯಾದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥ ಪಡಿಸಲು ಹೈಕೋರ್ಟ್ ನಿರ್ದೇಶನ ನೀಡಿತ್ತು. ಒಟ್ಟಾರೆ ಖಾಸಗಿ ಬಸ್‌ ಮಾಲೀಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಅವರ ಜನಪರ ಆಡಳಿತ ನಡೆಯಿಂದ ನರ್ಮ್ ನಗರ ಸಾರಿಗೆ ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.

Advertisements

ಸುಳ್ಯ, ಪುತ್ತೂರು, ಬೆಳ್ತಂಗಡಿಗಳಂತಹ ಗ್ರಾಮೀಣ ಭಾಗಗಳಿಗೂ ಸರ್ಕಾರಿ ಗ್ರಾಮಾಂತರ ಸಾರಿಗೆ ಬಸ್ಸು ನಿರಂತರ ಸೇವೆ ನೀಡಿದೆ. ಆದರೆ, ಇತ್ತೀಚೆಗೆ ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ಬಸ್ ಸಂಚಾರ ಸೇವೆ ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ. ಸರ್ಕಾರಿ ನರ್ಮ್ ನಗರ ಸಾರಿಗೆ ಬಸ್‌ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ ಎಂದು ಮನವರಿಕೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಶಕ್ತಿ ಯೋಜನೆಗೆ ಆಟೋ ಚಾಲಕರ ಸಂಘ ವಿರೋಧ

ಜೂನ್ 11 ರಿಂದ ಆರಂಭವಾಗಿರುವ ರಾಜ್ಯದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಸದ್ಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕ್ಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಂಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು, ಅಂತ ಮಹಿಳೆಯರಿಗೆ ಸರ್ಕಾರದ ಈ ಯೋಜನೆಯಿಂದ ಅನುಕೂಲಕರವಾಗಲಿದೆ ಎಂದು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಮಂಗಳೂರು ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಜಿಲ್ಲಾ ಮುಖಂಡ ರಝಾಕ್ ಮೊಂಟೆಪದವು, ಉಸ್ಮಾನ್ ಕಣ್ಣೂರು, ಮುಸ್ತಫಾ ಕಲ್ಲಕಟ್ಟೆ ಮುಂತಾದವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X