ಬೀದರ್ ನಗರದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಸಾರಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಸಾರಿಗೆ ಸಂಸ್ಥೆಯ ಡೇಟಾ ಆಪರೇಟರ್ ಮಂಜುನಾಥ ಹಾಗೂ ಬಸವಕಲ್ಯಾಣ ಡಿಪೊ ಬಸ್ ಕಂಡಕ್ಟರ್ ರವಿ ಎಂಬುವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
“ಪ್ರಯಾಣಿಕ ವಿದ್ಯಾಧರ್ ಎಂಬುವರು ಟಿಕೆಟ್ ಇಲ್ಲದೇ ಪ್ರಯಾಣಿಸುವಾಗ ಸಿಕ್ಕಿ ಬಿದ್ದಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಪ್ರಕರಣ ಮುಚ್ಚಿ ಹಾಕಲು ವಿದ್ಯಾಧರ್ ಎಂಬುವರರಿಂದ 35 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟು ಅದನ್ನು ಪಡೆಯುವ ವೇಳೆ ಇಬ್ಬರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ
ಲೋಕಾಯುಕ್ತ ಡಿವೈಎಸ್‌ಪಿ ಎನ್.ಎಮ್ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
